ಮೊದಲ ಏಕದಿನ ಪಂದ್ಯ: ಇಂಗ್ಲೆಂಡ್ ಗೆ 318 ರನ್ ಗುರಿ ನೀಡಿದ ಭಾರತ
ಪುಣೆ: ಕನ್ನಡಿಗ ಕೆ.ಎಲ್. ರಾಹುಲ್ ಮತ್ತು ಪದಾರ್ಪಣೆ ಪಂದ್ಯವಾಡುತ್ತಿರುವ ಕೃಣಾಲ್ ಪಾಂಡ್ಯ ಅವರು ಕೊನೆಯ ಹಂತದಲ್ಲಿ ತೋರಿದ ಬ್ಯಾಟಿಂಗ್ ಪ್ರದರ್ಶನದಿಂದ ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ ನಿಗದಿತ 50 ಓವರ್‌ಗಳಲ್ಲಿ 5 ವಿಕೆಟ್ ಕಳೆದುಕೊಂಡು 318 ರನ್ ಪೇರಿಸಿತು. ಆರಂಭಿಕರಾದ ಉಪನಾಯಕ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಉತ್ತಮ ಅಡಿಪಾಯ ಹಾಕಿಕೊಟ್ಟರು. ಈ ಜೋಡಿ ಮೊದಲ ವಿಕೆಟ್‌ಗೆ 15.1 ಓವರ್‌ಗಳಲ್ಲಿ 64 ರನ್‌ಗಳ ಜೊತೆಯಾಟವಾಡಿತು. ರೋಹಿತ್ (28) ವಿಕೆಟ್ ಪತನದ ಬಳಿಕ ಕ್ರೀಸ್‌ಗೆ ಬಂದ ನಾಯಕ ವಿರಾಟ್ ಕೊಹ್ಲಿ […]