ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ಅಗ್ನಿ ದುರಂತ: ರಾಜ್ಯ ಸರ್ಕಾರದಿಂದ 1.75 ಕೋಟಿ ರೂ. ಪರಿಹಾರ ಮಂಜೂರು
ಕುಂದಾಪುರ: ಕಳೆದ ನವೆಂಬರ್ ತಿಂಗಳಿನಲ್ಲಿ ಗಂಗೊಳ್ಳಿ ಮೀನುಗಾರಿಕಾ ಬಂದರಿನಲ್ಲಿ ನಡೆದ ಭೀಕರ ಅಗ್ನಿ ದುರಂತದಲ್ಲಿ ಕೋಟ್ಯಂತರ ರೂಪಾಯಿ ನಷ್ಟ ಅನುಭವಿಸಿದ ಬೋಟ್ ಮಾಲಕರಿಗೆ ರಾಜ್ಯ ಸರ್ಕಾರ 1.75 ಕೋಟಿ ಮಜೂರು ಮಾಡಿದೆ. ಶಿರೂರಿನಲ್ಲಿ ಪ್ರವಾಹದಿಂದ ಹಾನಿಗೀಡಾದ ನಾಡದೋಣಿಗಳಿಗೆ ರೂ. 28 ಲಕ್ಷ ಪರಿಹಾರವನ್ನು ಮೀನುಗಾರರ ಸಂಕಷ್ಟ ಪರಿಹಾರನಿಧಿಯ ಮೂಲಕ ಮಂಜೂರು ಮಾಡಲಾಗಿದೆ ಎಂದು ಉಡುಪಿ ಶಾಸಕ ಯಶ್ ಪಾಲ್ ಸುವರ್ಣ ತಿಳಿಸಿದ್ದಾರೆ. ಬೆಂಗಳೂರಿನಲ್ಲಿ ಮೀನುಗಾರಿಕೆ ಸಚಿವ ಮಾಂಕಾಳ ಎಸ್. ವೈದ್ಯ ಅಧ್ಯಕ್ಷತೆಯಲ್ಲಿ ನಡೆದ ಮೀನುಗಾರರ ಸಂಕಷ್ಟ ಪರಿಹಾರನಿಧಿ […]
ಮಲ್ಪೆ ಮೀನುಗಾರಿಕೆ ಬಂದರಿಗೆ ಸಚಿವ ಮಂಕಾಳ ವೈದ್ಯ ಭೇಟಿ : ಸಿ.ಆರ್.ಝಡ್ ಸಮಸ್ಯೆಯನ್ನು ಬಗೆಹರಿಸಲು ಕ್ರಮ
ಉಡುಪಿ: ನಗರದ ಮಲ್ಪೆ ಮೀನುಗಾರಿಕೆ ಬಂದರಿಗೆ ರಾಜ್ಯ ಮೀನುಗಾರಿಕೆ ಬಂದರು ಮತ್ತು ಒಳನಾಡು ಜಲಸಾರಿಗೆ ಸಚಿವ ಮಂಕಾಳ ಎಸ್ ವೈದ್ಯ ಸೋಮವಾರ ಭೇಟಿ ನೀಡಿ ಪರೀಶಿಲನೆ ನಡೆಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಲ್ಪೆ ಬಂದರನ್ನು ಅವಲೋಕಿಸಿದಾಗ ಬಂದರಿನಲ್ಲಿ ಬೋಟ್ ನಿಲ್ಲಿಸಲು, ಅವುಗಳನ್ನು ಓಡಿಸಲು ಹಾಗೂ ಅವುಗಳನ್ನು ಎಳೆಯಲು ಸಮಸ್ಯೆ ಇದೆ. ಈ ಸಮಸ್ಯೆಗಳನ್ನು ನಿವಾರಿಸಲು ನೀಲನಕ್ಷೆಯನ್ನು ತಯಾರಿಸಲಾಗುತ್ತಿದ್ದು, ಶೀಘ್ರದಲ್ಲಿಯೇ ಇಲ್ಲಿನ ಸಮಸ್ಯೆಗಳನ್ನು ಬಗೆಹರಿಸಲಾಗುವುದು ಎಂದರು. 2017-18 ನೇ ಸಾಲಿನಲ್ಲಿ ಬಂದರಿನಲ್ಲಿ ವಿವಿಧ ಕಾಮಗಾರಿಗಳನ್ನು ಕೈಗೊಳ್ಳಲು ಹಣ […]
ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆಯಡಿ 55 ಲಕ್ಷ ಉದ್ಯೋಗಾವಕಾಶ ಸೃಜನೆ; ಐದು ಇಂಟಿಗ್ರೇಟೆಡ್ ಅಕ್ವಾ ಪಾರ್ಕ್ ಸ್ಥಾಪನೆ
ನವದೆಹಲಿ: ಗುರುವಾರದಂದು ಸಂಸತ್ತಿನಲ್ಲಿ ಮಧ್ಯಂತರ ಬಜೆಟ್ ಮಂಡಿಸಿದ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಮೀನುಗಾರಿಕಾ ಕ್ಷೇತ್ರಕ್ಕೆ ನೀಡಲಾದ ಪ್ರೋತ್ಸಾಹದ ಬಗ್ಗೆ ಸದನಕ್ಕೆ ತಿಳಿಸಿದರು. “ಮೀನುಗಾರರಿಗೆ ಸಹಾಯ ಮಾಡುವ ಮಹತ್ವವನ್ನು ಅರಿತು ಮೀನುಗಾರಿಕೆಗಾಗಿ ಪ್ರತ್ಯೇಕ ಇಲಾಖೆಯನ್ನು ಸ್ಥಾಪಿಸಿದ್ದು ನಮ್ಮ ಸರ್ಕಾರ. ಇದು ಒಳನಾಡು ಮತ್ತು ಜಲಚರಗಳ ಉತ್ಪಾದನೆಯನ್ನು ದ್ವಿಗುಣಗೊಳಿಸಿದೆ. 2013-14 ರಿಂದ ಸಮುದ್ರಾಹಾರ ರಫ್ತು ಕೂಡ ದ್ವಿಗುಣಗೊಂಡಿದೆ. ಪ್ರಧಾನ ಮಂತ್ರಿ ಮತ್ಸ್ಯ ಸಂಪದ ಯೋಜನೆ (PMMSY) ಅನುಷ್ಠಾನವನ್ನು ಪ್ರತಿ ಹೆಕ್ಟೇರ್‌ಗೆ 3 ರಿಂದ 5 ಟನ್ ಗಳವರೆಗೆ ಜಲಕೃಷಿ […]
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಗೆ ರಾಷ್ಟ್ರ ಪ್ರಶಸ್ತಿಯ ಗರಿ
ಉಡುಪಿ: ಕೇಂದ್ರ ಸರ್ಕಾರದ ಮೀನುಗಾರಿಕೆ ಇಲಾಖೆ ಹಾಗೂ ರಾಷ್ಟ್ರೀಯ ಮೀನುಗಾರಿಕಾ ಅಭಿವೃದ್ಧಿ ಮಂಡಳಿ ವತಿಯಿಂದ ಮೀನುಗಾರಿಕಾ ಸಹಕಾರಿ ಸಂಘ ವಿಭಾಗದಲ್ಲಿ ನೀಡಲಾಗುವ ರಾಷ್ಟ್ರೀಯ ಅತ್ಯುತ್ತಮ ಮೀನುಗಾರಿಕಾ ಸಹಕಾರಿ ಸಂಸ್ಥೆ ಪ್ರಶಸ್ತಿಯು ಪ್ರಸಕ್ತ ಸಾಲಿನಲ್ಲಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಗೆ ಲಭಿಸಿದೆ. ಅಹಮದಾಬಾದ್ ನಲ್ಲಿ ವಿಶ್ವ ಮೀನುಗಾರಿಕೆ ದಿನಾಚರಣೆ ಅಂಗವಾಗಿ ಆಯೋಜಿಸಿದ್ದ ಗ್ಲೋಬಲ್ ಫಿಷರೀಸ್ ಕಾನ್ಫರೆನ್ಸ್ ಇಂಡಿಯಾ ಸಮಾರಂಭದಲ್ಲಿ ದ.ಕ ಉಡುಪಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಹಾಗೂ ಉಡುಪಿ […]
ಮೀನುಗಾರಿಕಾ ಸಹಕಾರ ಸಂಘಗಳ ಆಡಳಿತ ನಿರ್ವಹಣಾ ತರಬೇತಿ ಶಿಬಿರ
ಉಡುಪಿ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ನಿ. ಬೆಂಗಳೂರು, ಉಡುಪಿ ಜಿಲ್ಲಾ ಸಹಕಾರ ಯೂನಿಯನ್ ನಿ. ಉಡುಪಿ, ಹಾಗೂ ಸಹಕಾರ ಇಲಾಖೆ ಉಡುಪಿ ಜಿಲ್ಲೆ, ಇದರ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಉಡುಪಿ ಜಿಲ್ಲೆಯ ಎಲ್ಲಾ ಪ್ರಾಥಮಿಕ ಮೀನುಗಾರರ ಸಹಕಾರ ಸಂಘಗಳ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಮುಖ್ಯಕಾರ್ಯನಿರ್ವಾಹಕರಿಗೆ ಆಡಳಿತ ನಿರ್ವಹಣಾ ತರಬೇತಿ ಶಿಬಿರವನ್ನು ಉಡುಪಿ ವಿಧಾನಸಭಾ ಕ್ಷೇತ್ರದ ಶಾಸಕ ಯಶ್‌ಪಾಲ್ ಎ. ಸುವರ್ಣ ಉದ್ಘಾಟಿಸಿ ಶುಭ ಹಾರೈಸಿದರು. ಸಮಾರಂಭದ ಅಧ್ಯಕ್ಷತೆಯನ್ನು ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಬಿ. ಜಯಕರ […]