ಕೋವಿಡ್ ಪರಿಹಾರ ಪ್ಯಾಕೇಜ್ ನಲ್ಲಿ ಮೀನುಗಾರರ ಕಡೆಗಣನೆ: ರಾಜ್ಯ ಬಿಜೆಪಿ ಸರಕಾರದಿಂದ ಮೀನುಗಾರರಿಗೆ ಮಹಾದ್ರೋಹ; ರಮೇಶ್ ಕಾಂಚನ್

ಉಡುಪಿ: ಕರಾವಳಿ ಭಾಗದ ಮೀನುಗಾರರನ್ನು ಪ್ರತಿ ಚುನಾವಣೆಯಲ್ಲಿ ತನ್ನ ಮತ ಬ್ಯಾಂಕ್ ನಂತೆ ಬಳಸಿಕೊಳ್ಳುವ ರಾಜ್ಯ ಬಿಜೆಪಿ ಸರ್ಕಾರವು ಇದೀಗ ಕೊರೊನಾ ಸಂಕಷ್ಟ ಕಾಲದಲ್ಲಿ ಮೀನುಗಾರರನ್ನು ಮರೆತುಬಿಟ್ಟಿರುವುದು ಅಕ್ಷಮ್ಯ ಅಪರಾಧ ಎಂದು ಉಡುಪಿ ನಗರಸಭಾ ಪ್ರತಿಪಕ್ಷದ ನಾಯಕರಾದ ರಮೇಶ್ ಕಾಂಚನ್ ಹೇಳಿದ್ದಾರೆ. ಕೋವಿಡ್ ಲಾಕ್ ಡೌನ್ ನಿಂದ ರಾಜ್ಯದ ಎಲ್ಲಾ ಜನರಂತೆ ಮೀನುಗಾರರು ಕೂಡ ಬಹಳಷ್ಟು ಕಷ್ಟ ಅನುಭವಿಸುತ್ತಿದ್ದಾರೆ. ಈಗಾಗಲೇ ಮತ್ಸ್ಯ ಕ್ಷಾಮದಿಂದ ಮೀನುಗಾರರು ಸಾಕಷ್ಟು ಆರ್ಥಿಕ ಸಂಕಷ್ಟ ಎದುರಿಸುತ್ತಿದ್ದು, ಇದೀಗ ರಾಜ್ಯ ಸರ್ಕಾರ ಘೋಷಿಸಿರುವ ವಿಶೇಷ […]