ನಾಡದೋಣಿ ಮೀನುಗಾರರ ವಿವಿಧ ಬೇಡಿಕೆ ಈಡೇರಿಕೆಗಾಗಿ ಹಕ್ಕೊತ್ತಾಯ ಪಾದಯಾತ್ರೆ

ಉಡುಪಿ: ನಾಡದೋಣಿ ಮೀನುಗಾರರಿಗೆ ಸೀಮೆ ಎಣ್ಣೆ ಬಿಡುಗಡೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿ. 3ರಂದು ಬೈಂದೂರು ಹಾಗೂ ಕುಂದಾಪುರ ತಾಲೂಕು ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟದಿಂದ ಹಕ್ಕೊತ್ತಾಯ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ ಎಂದು ಬೈಂದೂರು ನಾಡದೋಣಿ ಸಂಘದ ಅಧ್ಯಕ್ಷ ಆನಂದ ಕಾರ್ವಿ ಉಪ್ಪುಂದ ತಿಳಿಸಿದರು. ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಉಡುಪಿಯ ಎಂಜಿಎಂ ಕಾಲೇಜಿನಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಹಕ್ಕೊತ್ತಾಯ ಪಾದಯಾತ್ರೆ ನಡೆಸಲಿದ್ದು, ಸುಮಾರು ಐದು ಸಾವಿರಕ್ಕೂ ಹೆಚ್ಚು ಮೀನುಗಾರರು ಜಾಥಾದಲ್ಲಿ ಭಾಗವಹಿಸಲಿದ್ದಾರೆ ಎಂದರು. ರಾಜ್ಯ ಸರ್ಕಾರದ […]