ಭಟ್ಕಳ: ಮೀನುಗಾರರನ್ನು ಅಪಹರಿಸಿ ಲಕ್ಷಾಂತರ ಮೌಲ್ಯದ ಮೀನು, ಡೀಸೆಲ್‌ ದರೋಡೆ

ಭಟ್ಕಳ : ಮೀನುಗಾರಿಕೆ ಮುಗಿಸಿ ವಾಪಸು ಬರುತ್ತಿದ್ದ ಆಳಸಮುದ್ರ ಬೋಟನ್ನು ತಡೆದು ನಿಲ್ಲಿಸಿ ಬೋಟಿನಲ್ಲಿದ್ದ ಲಕ್ಷಾಂತರ ರೂ. ಮೌಲ್ಯದ ಮೀನು, ಡೀಸೆಲ್‌ ಸಹಿತ 7 ಮಂದಿ ಮೀನುಗಾರರನ್ನು 25 ಜನರ ತಂಡ ಅಪಹರಿಸಿದ ಘಟನೆ ಭಟ್ಕಳದ ಮಾವಿನ ಕುರ್ವೆ ಬಂದರಿನಲ್ಲಿ ನಡೆದಿದೆ. ಮಲ್ಪೆಯ ಚೇತನ್‌ ಸಾಲ್ಯಾನ್‌ ಅವರಿಗೆ ಸೇರಿದ ಕೃಷ್ಣನಂದನ ಆಳಸಮುದ್ರ ಬೋಟಿನಲ್ಲಿ ಈ ಘಟನೆ ನಡೆದಿದ್ದು ಅದರಲ್ಲಿ ಮೀನುಗಾರಿಕೆಗೆ ತೆರಳಿದ್ದ ನಾಗರಾಜ್‌ ಹರಿಕಾಂತ್‌, ನಾಗರಾಜ್‌ ಎಚ್‌., ಅರುಣ್‌ ಹರಿಕಾಂತ ಅಂಕೋಲ, ಅಶೋಕ ಕುಮಟಾ, ಕಾರ್ತಿಕ ಹರಿಕಾಂತ ಮಂಕಿ, […]

ಮಲ್ಪೆ: ಕರ್ತವ್ಯಕ್ಕೆ ತೆರಳಿದ್ದ ವೇಳೆ ಬೋಟ್ ನಿಂದ ಕಾಲು ಜಾರಿ ಬಿದ್ದು ಮೀನುಗಾರ ಮೃತ್ಯು

ಮಲ್ಪೆ: ಮೀನುಗಾರಿಕೆ ಕರ್ತವ್ಯಕ್ಕೆ ತೆರಳುತ್ತಿದ್ದ ವೇಳೆ ಬೋಟಿನಿಂದ ಆಕಸ್ಮಿಕವಾಗಿ ಕಾಲು ಜಾರಿ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟ ಘಟನೆ ವರದಿಯಾಗಿದೆ. ಜಾರ್ಖಂಡ್ ಮೂಲದ ಮನೋಜ್ ಸನ್(32) ಮೃತ ಪಟ್ತ ವ್ಯಕ್ತಿ. ಆ.31 ರ ರಾತ್ರಿ ಮೀನುಗಾರರೊಂದಿಗೆ ಮಲ್ಪೆ ಬಂದರಿನಿಂದ ಸುಮಾರು ಎರಡು ನಾಟಿಕಲ್ ಮೈಲು ದೂರದಲ್ಲಿ ಮೀನುಗಾರಿಕೆ ನಡೆಸಲು ತೆರಳಿದ್ದರು. ದುರದೃಷ್ಟವಶಾತ್ ಕಾಲು ಜಾರಿ ಸಮುದ್ರಕ್ಕೆ ಬಿದ್ದ ಮನೋಜ್ ಸನ್ ಅವರನ್ನು ಸಹಚರ ಕೀರ್ತನ್ ಎಂಬವರು ಮೇಲಕ್ಕೆತ್ತಿ ಉಪಚಾರ ನೀಡಿದ್ದಾರೆ. ಆದರೂ ಮನೋಜ್ ಸನ್ ಸ್ವಸ್ಥರಾಗದ್ದನ್ನು ಕಂಡು ಮಣಿಪಾಲದ […]

ಪಕ್ಷ ಪ್ರಚಾರಕ್ಕೆ ಕರುನಾಡ ಸಿಂಘಂ ಖ್ಯಾತಿಯ ಅಣ್ಣಾಮಲೈ ಸಾಥ್: ಇಂದು ಕೇಸರಿ ಕಲರವ ಬೃಹತ್ ರೋಡ್ ಶೋ

ಉಡುಪಿ: ಇಂದು ಮಧ್ಯಾಹ್ನ 3 ಗಂಟೆಗೆ ಬಿಜೆಪಿ ಅಭ್ಯರ್ಥಿ ಯಶ್ ಪಾಲ್ ಸುವರ್ಣ ಮತ್ತು ಕರ್ನಾಟಕದ ಸಿಂಘಂ ಖ್ಯಾತಿಯ ಅಣ್ಣಾಮಲೈ ನೇತೃತ್ವದಲ್ಲಿ ಬೃಹತ್ ರೋಡ್ ಶೋ ಏಳೂರು ಮೊಗವೀರ ಭವನದಿಂದ ಹೊರಟು ವಡಭಾಂಡೇಶ್ವರ ಬಲರಾಮ ದೇವಸ್ಥಾನವನ್ನು ತಲುಪಲಿದೆ. ಆ ಬಳಿಕ ನಡೆಯುವ ಬೃಹತ್ ಸಮಾವೇಶದಲ್ಲಿ ಕೆ. ಅಣ್ಣಾಮಲೈ ಅವರು ಸಭೆಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಉಚ್ಚಿಲ: ವಿನಯ್ ಕುಮಾರ್ ಸೊರಕೆ ನೇತೃತ್ವದಲ್ಲಿ ಕಾಂಗ್ರೆಸ್ ಕೈ ಹಿಡಿದ 300 ಕ್ಕೂ ಹೆಚ್ಚು ಮೀನುಗಾರರು

ಉಚ್ಚಿಲ: ಬುಧವಾರದಂದು ಉಚ್ಚಿಲ ಬಡಾ ಗ್ರಾಮದ 300ಕ್ಕೂ ಹೆಚ್ಚು ಮೀನುಗಾರ ಮುಖಂಡರು ಹಾಗೂ ಯುವಕ ಮತ್ತು ಯುವತಿಯರು ಕಾಂಗ್ರೆಸ್ ಪಕ್ಷ ಸೇರ್ಪಡೆಗೊಂಡರು. ಕಾಪು ಕಾಂಗ್ರೆಸ್ ಅಭ್ಯರ್ಥಿ ವಿನಯ್ ಕುಮಾರ್ ಸೊರಕೆ ಪಕ್ಷದ ಧ್ವಜ ನೀಡಿ ಮೀನುಗಾರರನ್ನು ಬರಮಾಡಿಕೊಂಡರು. ಈ ಸಂದರ್ಭದಲ್ಲಿ ಮಾತನಾಡಿದ ವಿನಯ್ ಕುಮಾರ್ ಸೊರಕೆ, ಕಡಲ ತಡಿಯ ಈ ಭಾಗದಲ್ಲಿ ಮೀನುಗಾರರು ಬಹಳ ತೊಂದರೆಯನ್ನು ಅನುಭವಿಸುತ್ತಿದ್ದಾರೆ. ಇಷ್ಟು ಜನ ಮೀನುಗಾರರು ಕಾಂಗ್ರೆಸ್ ಪಕ್ಷ ಸೇರ್ಪಡೆಯಾಗುತ್ತಿರುವುದು ಇದೇ ಮೊದಲು. ಮೊಗವೀರ ಸಮಾಜವನ್ನು ಕೇವಲ‌ ಓಟ್ ಬ್ಯಾಂಕ್ ಗೆ […]

ಮೀನುಗಾರರ ಸಂಕಷ್ಟ ಪರಿಹಾರ ನಿಧಿ ಶುಲ್ಕ ಪಾವತಿಸುವಂತೆ ಸೂಚನೆ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಮೀನುಗಾರರ ಸಂಕಷ್ಟ ಪರಿಹಾರ ನಿಧಿಗೆ ಅನುದಾನ ಸಂಗ್ರಹಿಸಲು ಸರ್ಕಾರವು ಯಾಂತ್ರೀಕೃತ ಮೀನುಗಾರಿಕೆ ದೋಣಿಗಳಿಗೆ ನಿಗದಿಪಡಿಸುವ ರಾಜ್ಯ ಮಾರಾಟಕರ ದರದ ಶೇ. 1.5 ರ ಮೊತ್ತವನ್ನು ಡೀಸೆಲ್ ವಿತರಣೆ ಮಾಡುವ ಸಮಯದಲ್ಲಿ ಪ್ರತಿ ದೋಣಿಗೆ ನಿಗದಿಪಡಿಸಿರುವ ಡೀಸೆಲ್ ಪ್ರಮಾಣಕ್ಕನುಗುಣವಾಗಿ ಮೀನುಗಾರಿಕೆ ದೋಣಿ ಮಾಲೀಕರಿಂದ ಮೀನುಗಾರರ ಸಂಕಷ್ಟ ಪರಿಹಾರ ನಿಧಿಯ ಶುಲ್ಕದ ವಸೂಲಾತಿಯನ್ನು ತಕ್ಷಣ ಪ್ರಾರಂಭಿಸಿ, ಆ ಮೊತ್ತವನ್ನು ಡೀಸೆಲ್ ಬಂಕ್ ಮಾಲಿಕರು ಮೀನುಗಾರರ ಸಂಕಷ್ಟ ಪರಿಹಾರ ನಿಧಿಗಾಗಿ ಮೀನುಗಾರಿಕೆ ನಿರ್ದೇಶಕರು, ಬೆಂಗಳೂರು ಹೆಸರಿನ […]