ಕಾರ್ಕಳ: ಬಗೆಬಗೆ ಮೀನಿನ ಖಾದ್ಯ ಸವಿದ ತುಳುನಾಡಿಗರು

ಕಾರ್ಕಳ: ಜ. 26 ರಿಂದ 30 ರ ವರೆಗೆ ಕಾರ್ಕಳದ ಯರ್ಲಪಾಡಿಯಲ್ಲಿ ಪರಶುರಾಮ ಥೀಮ್ ಪಾರ್ಕ್ ನ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಮಲ್ಪೆ ಮೀನುಗಾರರ ಉತ್ಪಾದಕ ಕಂಪನಿಯು ಆಹಾರ ಮಳಿಗೆ ಮತ್ತು ಕಂಪನಿಯ ಉತ್ಪನ್ನಗಳ ಪ್ರದರ್ಶನ ಮಳಿಗೆ ಹಾಕಿದ್ದು, ಕಂಪನಿಯ ಮೀನುಗಾರ ಮಹಿಳೆಯರು, ಆಹಾರ ಮಳಿಗೆಯಲ್ಲಿ ವಿವಿಧ ಮೀನಿನ ಖಾದ್ಯಗಳು, ಶುಚಿ ರುಚಿಯಾದ ಅಡುಗೆಗಳನ್ನು ಮಾರಾಟಕ್ಕಿಟ್ಟಿದ್ದರು. ಉತ್ಪನ್ನಗಳ ಪ್ರದರ್ಶನದ ಮಳಿಗೆಯಲ್ಲಿ ಕಂಪನಿಯ ಸದಸ್ಯರು ತಯಾರಿಸಿದ ಮೀನಿನ ಉಪ್ಪಿನಕಾಯಿ, ಚಟ್ನಿ ಪುಡಿ, ಒಣ ಮೀನು, ಮೀನಿನ ಚಕ್ಕುಲಿ, ಮೀನಿನ ಹಪ್ಪಳ […]

ತುರ್ತು ಸೇವೆಗಾಗಿ ಕರಾವಳಿಗೆ ಬೇಕು ಸುಸಜ್ಜಿತ ಸೀ ಆಂಬ್ಯುಲೆನ್ಸ್: ಮೀನುಗಾರರ ಬೇಡಿಕೆಗಿಲ್ಲ ಸೂಕ್ತ ಸ್ಪಂದನೆ

ಮಲ್ಪೆ : ಸಮುದ್ರ ಮಧ್ಯೆ ಅವಘಡಗಳು ಸಂಭವಿಸಿದಾಗ ತುರ್ತು ಸೇವೆಗಾಗಿ ಕರಾವಳಿ ಕಾವಲು ಪಡೆಯಲ್ಲಿ ಸೀ ಆ್ಯಂಬುಲೆನ್ಸ್‌ ಇಲ್ಲ. ಈ ಬಗ್ಗೆ ಮೀನುಗಾರರು ಹಲವು ವರ್ಷದಿಂದ ಬೇಡಿಕೆ ಸಲ್ಲಿಸಿದ್ದರೂ ಸರಕಾರದಿಂದ ಯಾವುದೇ ಮನ್ನಣೆ ದೊರಕಿಲ್ಲ. ರಾಜ್ಯದ 320 ಕಿ.ಮೀ. ಕರಾವಳಿಯ ಭದ್ರತೆ ಮತ್ತು ಕಾರ್ಯಾಚರಣೆ ಜತೆಗೆ ಸಮುದ್ರದ ಮಧ್ಯೆ ಸಂಕಷ್ಟಕ್ಕೆ ಸಿಲುಕಿರುವ ಮೀನುಗಾರರನ್ನು ರಕ್ಷಿಸುವ ಕೆಲಸವನ್ನು ಕರಾವಳಿ ಕಾವಲು ಪಡೆಗೆ ವಹಿಸಲಾಗಿದೆ. ಮಲ್ಪೆಯಲ್ಲಿ ಇದರ ಕೇಂದ್ರ ಕಚೇರಿ ಇದ್ದು, ಮಲ್ಪೆ ವ್ಯಾಪ್ತಿಯಲ್ಲಿ ಕಳೆದ 10 ವರ್ಷಗಳಿಂದ 85ಕ್ಕೂ […]

ಉಚ್ಚಿಲ: ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿ ಮುಳುಗಡೆ; ಆರು ಲಕ್ಷ ರೂ ಗೂ ಅಧಿಕ ನಷ್ಟ

ಪಡುಬಿದ್ರೆ: ಇಲ್ಲಿಗೆ ಸಮೀಪದ ಉಚ್ಚಿಲದಲ್ಲಿ ಮೀನುಗಾರಿಕೆಗೆಂದು ತೆರಳಿದ್ದ ದೋಣಿಯೊಂದು ಪ್ರಕ್ಷುಬ್ದ ಸಮುದ್ರದ ಅಲೆಗಳಿಗೆ ಸಿಲುಕಿ ಮುಳುಗಡೆಯಾಗಿರುವ ಘಟನೆ ಸೋಮವಾರದಂದು ನಡೆದಿದೆ. ಉಚ್ಚಿಲ ನಿವಾಸಿ ವಿಮಲಾ ಸಿ ಪುತ್ರನ್ ರವರಿಗೆ ಸೇರಿದ ಶ್ರೀ ಗಿರಿಜಾ ಎನ್ನುವ ದೋಣಿಯಲ್ಲಿ ಮೀನುಗಾರರು ಮೀನು ಹಿಡಿಯಲು ಹೋಗಿದ್ದ ಸಂದರ್ಭದಲ್ಲಿ ಹವಾಮಾನ ವೈಪರೀತ್ಯದಿಂದಾಗಿ ಕಡಲು ಪ್ರಕ್ಷುಬ್ದಗೊಂಡು ದೋಣಿ ಮಗುಚಿ ಬಿದ್ದಿದೆ. ಇದನ್ನು ಕಂಡ ಅಲ್ಲೇ ಸಮೀಪದಲ್ಲಿದ್ದ ಮೀನುಗಾರರು ದೋಣಿಯಲ್ಲಿದ್ದ ಮೀನುಗಾರರ ನೆರವಿಗೆ ಧಾವಿಸಿ ಏಳು ಮಂದಿ ಮೀನುಗಾರರನ್ನು ರಕ್ಷಿಸಿದ್ದಾರೆ. ದೋಣಿ ಮುಳುಗಡೆಯಾದ್ದರಿಂದ ದೋಣಿಯಲ್ಲಿದ್ದ ಬಲೆ […]

ಅರಬ್ಬಿ ಸಮುದ್ರದಲ್ಲಿ ಪ್ರಕ್ಷುಬ್ದ ವಾತಾವರಣ ಸಾಧ್ಯತೆ: ಮೀನುಗಾರಿಕೆಗೆ ತೆರಳದಂತೆ ಎಚ್ಚರಿಕೆ ನೀಡಿದ ಹವಾಮಾನ ಇಲಾಖೆ

ಉಡುಪಿ: ಭಾರತೀಯ ಹವಾಮಾನ ಇಲಾಖೆಯು ಭಾನುವಾರ ಮಧ್ಯಾಹ್ನದಂದು ಮುಂದಿನ ಎರಡು ದಿನ ದಕ್ಷಿಣ ಭಾರತದ ರಾಜ್ಯಗಳಾದ ತಮಿಳುನಾಡು, ಕರ್ನಾಟಕ, ಕೇರಳ ಮತ್ತು ಕರಾವಳಿ ಆಂಧ್ರಪ್ರದೇಶದಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಮುನ್ಸೂಚನೆ ನೀಡಿದೆ. ಶುಕ್ರವಾರ ರಾತ್ರಿ ಮಹಾಬಲಿಪುರಂ ಬಳಿ ಭೂಕುಸಿತಕ್ಕೆ ಕಾರಣವಾದ ಮಾಂಡೌಸ್ ಚಂಡಮಾರುತದ ಹವಾಮಾನ ವ್ಯವಸ್ಥೆಯಿಂದಾಗಿ ತಮಿಳುನಾಡು, ಆಂಧ್ರಪ್ರದೇಶ ಮತ್ತು ಕರ್ನಾಟಕ ರಾಜ್ಯಗಳಾದ್ಯಂತ ಮತ್ತು ಕೇಂದ್ರಾಡಳಿತ ಪ್ರದೇಶವಾದ ಪುದುಚೇರಿಯಲ್ಲಿ ಮಳೆಯಾಗಿದೆ. ತಮಿಳುನಾಡು, ದಕ್ಷಿಣ ಒಳ ಕರ್ನಾಟಕ ಮತ್ತು ದಕ್ಷಿಣ ಕರಾವಳಿ ಆಂಧ್ರಪ್ರದೇಶದ ಮೇಲೆ ಮತ್ತು ಕೇರಳ […]

ಸರಕಾರ ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಮಸ್ಯೆಗೆ ತಕ್ಷಣ ಸ್ಪಂದಿಸದಿದ್ದಲ್ಲಿ ತೀವ್ರ ಹೋರಾಟ: ರಮೇಶ್ ಕಾಂಚನ್

ಉಡುಪಿ: ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರಿಗೆ ಕಳೆದ ಹತ್ತು ತಿಂಗಳಿನಿಂದ ಸೀಮೆಎಣ್ಣೆ ಬಿಡುಗಡೆಗೊಂಡಿಲ್ಲ. ಈಗಾಗಲೇ ನಾಡದೋಣಿ ಸಂಘದವರು ಉಡುಪಿ ಜಿಲ್ಲಾಧಿಕಾರಿ ಕಚೇರಿಯ ಎದುರು ಪ್ರತಿಭಟನೆ ನಡೆಸಿ ತಕ್ಷಣ ಸೀಮೆಎಣ್ಣೆ ಬಿಡುಗಡೆ ಮಾಡಿ ಎಂದು ಒತ್ತಾಯಿಸಿದ ಹೊರತಾಗಿಯೂ ಸರಕಾರ ನಿರ್ಲಕ್ಷ್ಯ ಧೋರಣೆ ಮುಂದುವರಿಸಿರುವುದು ಖಂಡನಾರ್ಹವಾಗಿದೆ. ನಾಡದೋಣಿ ಮತ್ತು ಗಿಲ್‌ನೆಟ್ ಮೀನುಗಾರರ ಸಮಸ್ಯೆಗೆ ತಕ್ಷಣ ಸ್ಪಂದಿಸಿ ಸೀಮೆಎಣ್ಣೆ ಬಿಡುಗಡೆ ಮಾಡುವಂತೆ ಉಡುಪಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ರಮೇಶ್ ಕಾಂಚನ್ ಸರಕಾರವನ್ನು ಆಗ್ರಹಿಸಿದ್ದಾರೆ. ಕಾಂಗ್ರೆಸ್ ಸರಕಾರವಿದ್ದ ಸಂದರ್ಭದಲ್ಲಿ ನಾಡದೋಣಿ ಮತ್ತು ಗಿಲ್‌ನೆಟ್ […]