ಮೀನುಗಾರರ ಮಕ್ಕಳ ಉನ್ನತ ಶಿಕ್ಷಣದ ಶಿಷ್ಯವೇತನಕ್ಕಾಗಿ ಅರ್ಜಿ ಆಹ್ವಾನ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೀನುಗಾರರ ಮಕ್ಕಳ ಹೆಚ್ಚಿನ ಹಾಗೂ ಉನ್ನತ ಶಿಕ್ಷಣ ಪ್ರೋತ್ಸಾಹಿಸಲು ಹೊಸ ಶಿಷ್ಯ ವೇತನ ಯೋಜನೆಯನ್ನು ಮುಖ್ಯಮಂತ್ರಿಗಳು ಘೋಷಿಸಿದ್ದು, ಈ ಯೋಜನೆಯ ಸೌಲಭ್ಯ ಪಡೆಯಲು ಮೀನುಗಾರರ ಮಕ್ಕಳಿಂದ ಅರ್ಜಿ ಆಹ್ವಾನಿಸಲಾಗಿದೆ. 8, 9, 10, ಪಿ.ಯು.ಸಿ., ಸ್ನಾತಕ ಹಾಗೂ ಸ್ನಾತಕೋತ್ತರ ಪದವಿಯಲ್ಲಿ ವ್ಯಾಸಾಂಗ ಮಾಡುತ್ತಿರುವ ಜಿಲ್ಲೆಯ ಮೀನುಗಾರರ ಸಹಕಾರಿ ಸಂಘದ ಸದಸ್ಯರು ಹಾಗೂ ಮೀನು ಕೃಷಿಕರ ಮಕ್ಕಳು ತಾಲೂಕು ಮೀನುಗಾರಿಕೆ ಸಹಾಯಕ ನಿರ್ದೇಶಕರು ಅಥವಾ ಸಂಬಂಧಪಟ್ಟ ಮೀನುಗಾರರ ಸಹಕಾರಿ ಸಂಘಗಳಿಂದ […]
ಸಚಿವ ಅಂಗಾರ ನೇತೃತ್ವದಲ್ಲಿ ಉತ್ತರ ಕನ್ನಡ ಮೀನುಗಾರರ ಸಮಸ್ಯೆಗಳ ಬಗ್ಗೆ ಚರ್ಚೆ

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಮೀನುಗಾರರ ಸಮಸ್ಯೆಗಳ ಬಗ್ಗೆ ವಿಧಾನಸೌದದಲ್ಲಿ ಮೀನುಗಾರಿಕಾ ಸಚಿವ ಎಸ್.ಅಂಗಾರ, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಶಾಸಕರು, ಅಧಿಕಾರಿಗಳು ಮತ್ತು ಮೀನುಗಾರರೊಂದಿಗೆ ಗುರುವಾರದಂದು ಸುಧೀರ್ಘ ಸಭೆ ನಡೆಸಿ ಸಮಸ್ಯೆಗಳ ಬಗ್ಗೆ ಚರ್ಚಿಸಲಾಯಿತು. ಉತ್ತರ ಕನ್ನಡ ಜಿಲ್ಲೆಯಲ್ಲಿ ಆಳಸಮುದ್ರದಲ್ಲಿ ಮೀನುಗಾರಿಕೆ ಮಾಡುವ ಯಾಂತ್ರಿಕ ದೋಣಿಗಳ ಬೇಡಿಕೆ ಇದ್ದು, 2022-23 ನೇ ಸಾಲಿನ ಬಜೆಟ್‌ನಲ್ಲಿ ಘೋಷಿಸಿರುವಂತೆ ಅರ್ಜಿ ಸಲ್ಲಿಸಿದ ಮೀನುಗಾರರಿಗೆ ಹಣ ಮಂಜೂರು ಮಾಡಬೇಕೆಂಬ ಪ್ರಸ್ತಾಪದ ಬಗ್ಗೆ ಉತ್ತರಿಸಿದ ಸಚಿವ ಅಂಗಾರ, ಇಲಾಖೆಯ […]
ಕರಾವಳಿ ಕರ್ನಾಟಕದಲ್ಲಿ ಅತ್ಯಾಧಿಕ ಮಳೆ ಮುನ್ಸೂಚನೆ: ರೈತರು ಮತ್ತು ಮೀನುಗಾರರಿಗೆ ಮುನ್ನೆಚ್ಚರಿಕೆಗಳು

ಉಡುಪಿ/ಮಂಗಳೂರು: ಮುಂದಿನ 48 ರಿಂದ 72 ಗಂಟೆಗಳ ಅವಧಿಯಲ್ಲಿ ಕರ್ನಾಟಕದ, ವಿಶೇಷವಾಗಿ ಕರಾವಳಿಯ ಪ್ರತ್ಯೇಕ ಸ್ಥಳಗಳಲ್ಲಿ ಅಧಿಕದಿಂದ ಅತ್ಯಾಧಿಕ ಮಳೆಯಾಗುವ ಸಾಧ್ಯತೆ ಇದ್ದು, ರೈತರಿಗೆ ಮತ್ತು ಮೀನುಗಾರರಿಗೆ ಮುನ್ನೆಚ್ಚರಿಕೆಗಳನ್ನು ನೀಡಲಾಗಿದೆ. ರೈತರು ಮುಂದಿನ 2-3 ದಿನಗಳವರೆಗೆ ಎಲ್ಲಾ ಕೃಷಿ ಚಟುವಟಿಕೆಗಳನ್ನು ಮುಂದೂಡಬಹುದು (ಬಿತ್ತನೆ, ಸಿಂಪಡಣೆ, ರಸಗೊಬ್ಬರ ಬಳಕೆ ಮತ್ತು ಕೊಯ್ಲು) ರೈತರು ಭತ್ತದ ನಾಟಿಯನ್ನು ಮುಂದೂಡಬಹುದು ಮೀನುಗಾರರು ಸಮುದ್ರ ತೀರದಿಂದ ದೂರ ಇರುವಂತೆ ಸೂಚಿಸಲಾಗಿದೆ ಅಡಿಕೆ ತೋಟಗಳಲ್ಲಿ ರೈತರು ನೀರು ಹರಿಯಲು […]
ಮಲ್ಪೆ: ಚಲಿಸುತ್ತಿರುವ ಸ್ಕೂಟರ್ ನಲ್ಲೇ ಉಸಿರು ನಿಲ್ಲಿಸಿದ ಮೀನುಗಾರ

ಮಲ್ಪೆ: ಮೀನುಗಾರಿಕೆ ಮುಗಿಸಿಕೊಂಡು ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ತೆರಳುತ್ತಿದ್ದ ವೇಳೆ ಹೃದಯಾಘಾತವಾಗಿ ಮೀನುಗಾರನೋರ್ವ ಮೃತಪಟ್ಟ ಘಟನೆ ಮಲ್ಪೆ ಕಂಬಳತೋಟ ಎಂಬಲ್ಲಿ ಬುಧವಾರ ಬೆಳಿಗ್ಗೆ ನಡೆದಿದೆ. ಮಲ್ಪೆ ಕಂಬಳತೋಟ ನಿವಾಸಿ 32 ವರ್ಷದ ಪ್ರತಾಪ್ ಮೃತಪಟ್ಟ ಮೀನುಗಾರ. ಇವರು ಇಂದು ಬೆಳಿಗ್ಗೆ ಮೀನುಗಾರಿಕೆ ಮುಗಿಸಿಕೊಂಡು ಅಕ್ಕನ ಮಗ ಕಿರಣ್ ಎಂಬಾತನ ಸ್ಕೂಟರ್ ನಲ್ಲಿ ಹಿಂಬದಿ ಸವಾರನಾಗಿ ಮನೆಗೆ ಹೋಗುತ್ತಿದ್ದರು. ಈ ವೇಳೆ ಪ್ರತಾಪ್ ದಿಢೀರ್ ಅಸ್ವಸ್ಥಗೊಂಡು ಕಿರಣ್ ಮೈಮೇಲೆ ಬಿದಿದ್ದರು. ತಕ್ಷಣವೇ ಕಲ್ಯಾಣಪುರ ಗೊರಾಠಿ ಅಸ್ಪತ್ರೆಗೆ ಕರೆದುಕೊಂಡು […]
ಮರವಂತೆ ಮೀನುಗಾರರ ಸಹಕಾರ ಸಂಘ ನೂತನ ಕಟ್ಟಡ ಉದ್ಘಾಟನೆ

ಬೈಂದೂರು: ಮರವಂತೆ ಮೀನುಗಾರರ ಸಹಕಾರ ಸಂಘ ನಿ., ಮರವಂತೆ ಬೈಂದೂರು, ಇದರ ನೂತನ ಕಟ್ಟಡದ ಉದ್ಘಾಟನಾ ಸಮಾರಂಭ ದಲ್ಲಿ ಮುಖ್ಯ ಅತಿಥಿಯಾಗಿ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲಾ ಸಹಕಾರಿ ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ ಪಾಲ್ ಸುವರ್ಣ ಭಾಗವಹಿಸಿ ಶುಭ ಹಾರೈಸಿದರು. ಸಮಾರಂಭವನ್ನು ಬೈಂದೂರು ವಿಧಾನಸಭಾ ಕ್ಷೇತ್ರದ ಶಾಸಕ ಬಿ ಎಂ ಸುಕುಮಾರ ಶೆಟ್ಟಿ ಉದ್ಘಾಟಿಸಿದರು. ಉಡುಪಿ ಜಿಲ್ಲಾ ಸಹಕಾರಿ ಯೂನಿಯನ್ ಅಧ್ಯಕ್ಷ ಜಯಕರ ಶೆಟ್ಟಿ ಇಂದ್ರಾಳಿ, ಸಂಸ್ಥೆಯ ಅಧ್ಯಕ್ಷ ಪ್ರವೀಣ್ ಮತ್ತಿತರರು ಉಪಸ್ಥಿತರಿದ್ದರು.