ಆಳಸಮುದ್ರದಲ್ಲಿ ಮೀನುಗಾರಿಕಾ ಬೋಟ್ ದುರಂತ: ಮೂವರು ಸಾವು; ಆರು ಮಂದಿ ನಾಪತ್ತೆ

ಮಂಗಳೂರು: ಬೋಟ್ ದುರಂತ ಸಂಭವಿಸಿ ಮೂವರು ಮೀನುಗಾರರು ಮೃತಪಟ್ಟಿದ್ದು, ಆರು ಮಂದಿ ಮೀನುಗಾರರು ಕಣ್ಮರೆಯಾಗಿರುವ ಘಟನೆ ಮಂಗಳೂರು ಬಂದರಿನಿಂದ 43 ನಾಟಿಕಲ್ ಮೈಲ್ ದೂರದ ಆಳಸಮುದ್ರದಲ್ಲಿ ಇಂದು ನಡೆದಿದೆ. ಘಟನೆಯಲ್ಲಿ ಐವರು ಮೀನುಗಾರರನ್ನು ರಕ್ಷಿಸಲಾಗಿದೆ ಎಂದು ತಿಳಿದುಬಂದಿದೆ. ಮೀನುಗಾರಿಕಾ ಬೋಟ್ ಕೇರಳದ ಕೋಝಿಕೋಡ್ ಜಿಲ್ಲೆಯ ಬೇಪೋರ್ ನಿಂದ ಹೊರಟಿತ್ತು. ಇದರಲ್ಲಿ ತಮಿಳುನಾಡು ಮತ್ತು ಬಂಗಾಳ ಮೂಲದ ಕಾರ್ಮಿಕರಿದ್ದರು ಎನ್ನಲಾಗಿದೆ. ಈ ಕರಾವಳಿ ಪಡೆಯ ಮೂರು ಹಡಗು ಮತ್ತು ಏರ್ ಕ್ರಾಫ್ಟ್ ಮೂಲಕ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.