ಉಳ್ಳಾಲ: ಮೀನುಗಾರಿಕಾ ಬೋಟ್ ಮುಳುಗಡೆ; ಐವರು ಮೀನುಗಾರರು ಪ್ರಾಣಾಪಯದಿಂದ ಪಾರು

ಉಳ್ಳಾಲ: ಮೀನುಗಾರಿಕೆಗೆ ತೆರಳಿದ್ದ ಬೋಟೊಂದು ಶುಕ್ರವಾರ ಮುಂಜಾನೆ ಮಂಗಳೂರಿನ ಉಳ್ಳಾಲ ಸಮುದ್ರ ಮಧ್ಯೆ ಮುಳುಗಡೆಯಾಗಿದೆ. ಆದರೆ ಬೋಟ್‌ನಲ್ಲಿದ್ದ ಐವರು ಮೀನುಗಾರರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಉಳ್ಳಾಲ ನಿವಾಸಿ ನಯನಾ ಪಿ.ಸುವರ್ಣ ಅವರ ಮಾಲಕತ್ವದ ‘ನವಾಮಿ ಶಿವಾನಿ’ ಹೆಸರಿನ ಟ್ರಾಲ್ ಬೋಟ್ ನಲ್ಲಿ ಪ್ರವೀಣ್ ಸುವರ್ಣ ಸೇರಿದಂತೆ ಉತ್ತರ ಪ್ರದೇಶದ ಐವರು ಮೀನುಗಾರರು ಗುರುವಾರ ಸಂಜೆ ಟ್ರಾಲ್ ಮೀನುಗಾರಿಕೆಗೆ ತೆರಳಿದ್ದರು. ಮೀನುಗಾರಿಕೆ ಮುಗಿಸಿ ಶುಕ್ರವಾರ ನಸುಕಿನ ಜಾವ ನಾಲ್ಕು ಗಂಟೆಗೆ ವಾಪಸಾಗುತ್ತಿದ್ದಾಗ ಉಳ್ಳಾಲ ಸಮುದ್ರದಲ್ಲಿ ಬೋಟ್ ಕಲ್ಲೊಂದಕ್ಕೆ ಡಿಕ್ಕಿಯಾದ ಪರಿಣಾಮ […]

ಸೆ. 4 ಹಾಗೂ 5 ರಂದು ಮೀನುಗಾರಿಕೆ ದೋಣಿಗಳ ಭೌತಿಕ ಪರಿಶೀಲನೆ

ಉಡುಪಿ: ಮೀನುಗಾರಿಕೆ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಮೋಟಾರೀಕೃತ ಮೀನುಗಾರಿಕೆ ದೋಣಿಗಳಿಗೆ 2 ತಿಂಗಳ ನಿಷೇಧಿತ ಅವಧಿಯನ್ನು ಹೊರತುಪಡಿಸಿ, ವಾರ್ಷಿಕ 10 ತಿಂಗಳ ಅವಧಿಗೆ ಮಾಸಿಕ ಪ್ರತಿ ದೋಣಿಗೆ 300 ಲೀ. ನಂತೆ ಸೀಮೆಎಣ್ಣೆ ವಿತರಿಸಲು ಸರ್ಕಾರವು ಆದೇಶಿಸಿರುವ ಹಿನ್ನೆಲೆ, ಮೋಟಾರೀಕೃತ ಮೀನುಗಾರಿಕೆ ದೋಣಿಗಳಿಗೆ ಸೀಮೆಎಣ್ಣೆ ಪಡೆಯಲು ಪರ್ಮಿಟ್‌ಗಾಗಿ ದೋಣಿ ಮಾಲಕರು ಅರ್ಜಿ ಸಲ್ಲಿಸುವ ಮೊದಲು ಇಲಾಖೆಯಿಂದ ದೋಣಿಗಳನ್ನು ಭೌತಿಕ ಪರಿಶೀಲನೆ ಮಾಡಿ ನಂತರ ಪರವಾನಿಗೆ ಹಾಗೂ ಸೀಮೆಎಣ್ಣೆ ರಹದಾರಿಯನ್ನು ದೋಣಿ ಮಾಲಕರಿಗೆ ನೀಡಲಾಗುವುದು. ಆ ಪ್ರಯುಕ್ತ […]

ಜುಲೈ 3 ರಿಂದ 5 ರ ವರೆಗೆ ಯಾಂತ್ರೀಕೃತ ಮೀನುಗಾರಿಕಾ ದೋಣಿಗಳ ಪರಿಶೀಲನೆ

ಉಡುಪಿ: ಪ್ರಸಕ್ತ ಸಾಲಿನ ಮೀನುಗಾರಿಕೆ ಋತುವಿನ ಅವಧಿಗೆ ಮೀನುಗಾರಿಕೆ ಪರವಾನಗಿ ಮತ್ತು ಡೀಸಿಲ್ ಪಾಸ್ ಪುಸ್ತಕ ಪಡೆಯಲು, ಮೀನುಗಾರಿಕೆ ನಿರ್ದೇಶಕರು, ಬೆಂಗಳೂರು ರವರ ನಿರ್ದೇಶನದಂತೆ , ಮೀನುಗಾರಿಕೆ ನಿಷೇಧದ ಅವಧಿಯಲ್ಲಿ ಧಕ್ಕೆಯಲ್ಲಿ ನಿಲುಗಡೆಯಾಗಿರುವ ಜಿಲ್ಲೆಯ ಎಲ್ಲಾ ಯಾಂತ್ರೀಕೃತ ಮೀನುಗಾರಿಕಾ ದೋಣಿಗಳ ಭೌತಿಕ ಪರಿಶೀಲನೆ ಮತ್ತು ಸಮೀಕ್ಷೆ ನಡೆಸಲು ಮತ್ತು ಮೀನುಗಾರಿಕೆ ಪರವಾನಗಿ ಮತ್ತು ಡೀಸಿಲ್ ಪಾಸ್ ಪುಸ್ತಕ ವಿತರಿಸುವ ಸಲುವಾಗಿ ಮೀನುಗಾರಿಕೆ ಜಂಟಿ ನಿರ್ದೇಶಕರು, ಉಡುಪಿ ರವರು ತಂಡಗಳನ್ನು ರಚಿಸಿ ಮೀನುಗಾರಿಕಾ ದೋಣಿಗಳ ಪರಿಶೀಲನೆ ನಡೆಸಿ ವರದಿ […]

ಮ‌ಲ್ಪೆ : ಮೀನುಗಾರಿಕೆಗೆ ತೆರಳಿದ್ದ ಬೋಟ್ ಮುಳುಗಡೆ; 7 ಮಂದಿ ಮೀನುಗಾರರ ರಕ್ಷಣೆ

ಮಲ್ಪೆ: ಮಲ್ಪೆಯಿಂದ ಮೀನುಗಾರಿಕೆಗೆ ತೆರಳಿದ್ದ ಆಳಸಮುದ್ರ ದೋಣಿಯೊಂದು ಭಟ್ಕಳದ ನೇತ್ರಾಣಿ ಸಮೀಪದಲ್ಲಿ ಬಂಡೆಗೆ ಬಡಿದು ಮುಳುಗಡೆಗೊಂಡಿದೆ. ಅದರಲ್ಲಿದ್ದ 7 ಮಂದಿ ಮೀನುಗಾರರನ್ನು ಸಮೀಪದಲ್ಲಿದ್ದ ಬೋಟಿನವರು ರಕ್ಷಿಸಿದ್ದಾರೆ. ಉದ್ಯಾವರ ಸಂಪಿಗೆ ನಗರದ ರಾಹಿಲ್‌ ಅವರಿಗೆ ಸೇರಿದ ಸೀ ಬರ್ಡ್‌ ಬೋಟ್‌ ಮೇ 21ರಂದು ರಾತ್ರಿ ಮಲ್ಪೆ ಬಂದರಿನಿಂದ ತೆರಳಿತ್ತು. ಮೇ 22ರಂದು ಬೆಳಗ್ಗೆ ಭಟ್ಕಳ ನೇತ್ರಾಣಿ ಸಮೀಪ ಮೀನುಗಾರಿಕೆ ನಡೆಸುತ್ತಿರುವಾಗ ಗಾಳಿ-ಮಳೆ ಆರಂಭವಾಗಿದ್ದು, ಪರಿಣಾಮ ನಾವಿಕನ ನಿಯಂತ್ರಣ ತಪ್ಪಿ ಕಲ್ಲು ಬಂಡೆಗೆ ಬಡಿದಿದೆ. ಈ ವೇಳೆ ನೀರು ಒಳಗೆ […]