ಈ ವರ್ಷ ಐದು ಸಾವಿರ ಶಿಕ್ಷಕರ ನೇಮಕ: ಸಿಎಂ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದಲ್ಲಿ ಐದು ಸಾವಿರ ಶಿಕ್ಷಕರ ನೇಮಕಕ್ಕೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು. ಶಿಕ್ಷಕರ ಕೊರತೆ ನೀಗಿಸುವ ಕುರಿತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ.ಸಿ. ನಾಗೇಶ್ ಮಾಡಿದ ಮನವಿಗೆ ಸ್ಪಂದಿಸಿದ ಮುಖ್ಯಮಂತ್ರಿ, ಈ ಘೋಷಣೆ ಮಾಡಿದರು.