ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್: ಯಾರಿಗೆಲ್ಲ ಒಲಿಯಲಿದೆ ಮಂತ್ರಿಪಟ್ಟ?
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ನಾಳೆ (ಜ. 13) ಸಂಜೆ 4 ಗಂಟೆಯೊಳಗೆ ನೂತನ ಸಚಿವರ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ. ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವರಾಗುವವರಿಗೆ ಇಂದು ಸಂಜೆಯೊಳಗೆ ಮಾಹಿತಿ ನೀಡುತ್ತೇವೆ. ನಾಳೆ ಸಂಜೆ 4ಗಂಟೆಗೆ ನೂತನ ಸಚಿವರ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ ಎಂದು ತಿಳಿಸಿದ್ದಾರೆ. ಸರ್ಕಾರ ರಚನೆಯಲ್ಲಿ ನಿರ್ಣಯಕ ಪಾತ್ರ ನಿರ್ವಹಿಸಿದ ನೀಡಿದ ಎಂಟಿಬಿ ನಾಗರಾಜ್, ಆರ್. ಶಂಕರ್ ಹಾಗೂ […]