ನವೆಂಬರ್ 7 ರಿಂದ ಡಿಸೆಂಬರ್ 7 ರವರೆಗೆ ಕಾಲುಬಾಯಿ ಲಸಿಕಾ ಕಾರ್ಯಕ್ರಮ: ಜಿಲ್ಲಾಧಿಕಾರಿ ಕೂರ್ಮಾ ರಾವ್

ಕಾಲು ಬಾಯಿ ರೋಗವು ಜಾನುವಾರುಗಳಿಗೆ ಮಾರಣಾಂತಿಕ ಕಾಯಿಲೆಯಾಗಿದ್ದು, ಜಿಲ್ಲೆಯಲ್ಲಿ ಈ ರೋಗ ನಿಯಂತ್ರಣಕ್ಕಾಗಿ ರಾಷ್ಟ್ರೀಯ ಜಾನುವಾರು ರೋಗಗಳ ನಿಯಂತ್ರಣ ಕಾರ್ಯಕ್ರಮದಡಿ, 3 ನೇ ಸುತ್ತಿನ ಕಾಲುಬಾಯಿ ಲಸಿಕಾ ಕಾರ್ಯಕ್ರಮವು ನವೆಂಬರ್ 7 ರಿಂದ ಡಿಸೆಂಬರ್ 7 ರ ಅವಧಿಯಲ್ಲಿ ಹಮ್ಮಿಕೊಳ್ಳಲಾಗುತ್ತಿದ್ದು, ಈ ಕುರಿತು ಜಿಲ್ಲಾ ಮಟ್ಟದ ಕಾಲುಬಾಯಿ ರೋಗದ ನಿರ್ವಹಣಾ ಸಮಿತಿ ಸಭೆಯು ಬುಧವಾರದಂದು ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ಅಧ್ಯಕ್ಷತೆಯಲ್ಲಿ ನಡೆಯಿತು. ಲಸಿಕಾ ಕಾರ್ಯಕ್ರಮದಲ್ಲಿ ಯಾವುದೇ ಲೋಪದೋಷಗಳಾಗದಂತೆ ಕಟ್ಟೆಚ್ಚರ ವಹಿಸಿ ಕಾರ್ಯಕ್ರಮ ಅನುಷ್ಠಾನಗೊಳಿಸುವಂತೆ ಪಶುಪಾಲನಾ ಇಲಾಖೆಯ ಉಪ […]