ಫುಟ್ಬಾಲ್ ಪಂದ್ಯಾಟ: ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಾಜ್ಯಮಟ್ಟಕ್ಕೆ ಆಯ್ಕೆ

ಕುಂದಾಪುರ: ಉಡುಪಿ ಜಿಲ್ಲಾ ಪದವಿಪೂರ್ವ ಶಿಕ್ಷಣ ಇಲಾಖೆ ಹಾಗೂ ಗ್ರೀನ್ ವ್ಯಾಲಿ ಪದವಿ ಪೂರ್ವ ಕಾಲೇಜು ಶಿರೂರು ಇದರ ಜಂಟಿ ಆಶ್ರಯದಲ್ಲಿ ಜರುಗಿದ ಫುಟ್ಬಾಲ್ ಪಂದ್ಯಾಟದಲ್ಲಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ವಿಜ್ಞಾನ ವಿಭಾಗದ ಪ್ರಥಮ ಪಿಯುಸಿ ವಿದ್ಯಾರ್ಥಿ ಶ್ರವಣ್ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ರಾಜ್ಯ ಮಟ್ಟಕ್ಕೆ ಆಯ್ಕೆಯಾದ ವಿದ್ಯಾರ್ಥಿಗೆ ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು, ಉಪನ್ಯಾಸಕ ವೃಂದದವರು ಹಾಗೂ ಸಿಬ್ಬಂದಿ ವರ್ಗದವರು ಅಭಿನಂದನೆ ಸಲ್ಲಿಸಿದ್ದಾರೆ.