ಕುಂದಾಪುರ: ಅರಣ್ಯಕೆ ಇಲಾಖೆ ವಾಹನ ಚಾಲಕನ ಮೇಲೆ ಹಲ್ಲೆ; ಜೀವ ಬೆದರಿಕೆ

ಕುಂದಾಪುರ: ಕುಂದಾಪುರ ಅರಣ್ಯ ಇಲಾಖೆಯ ಕಚೇರಿಯಲ್ಲಿ ಹೊರಗುತ್ತಿಗೆ ಆಧಾರದಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಚಾಲಕರೊಬ್ಬರ ಮೇಲೆ ನಾಲ್ವರು ಹಲ್ಲೆ ನಡೆಸಿದ ಘಟನೆ ಬುಧವಾರ ಸಂಜೆ ನಡೆದಿದೆ. ಕುಂದಾಪುರದ ವಲಯ ಅರಣ್ಯಾಧಿಕಾರಿಗಳ ಕಚೇರಿ ಆವರಣದಲ್ಲಿ ಈ ಘಟನೆ ನಡೆದಿದ್ದು ಹಲ್ಲೆಗೊಳಗಾದ ಚಾಲಕ ಕುಂದಾಪುರದ ಕುಂದೇಶ್ವರದ ನಿವಾಸಿ ಅಶೋಕ್ (38) ಆಸ್ಪತ್ರೆಗೆ ದಾಖಲಾಗಿದ್ದಾರೆ. ಬುಧವಾರ ಸಂಜೆ ವೇಳೆಗೆ ವಲಯ ಅರಣ್ಯಾಧಿಕಾರಿಗಳ ಕಚೇರಿ ಆವರಣದೊಳಕ್ಕೆ ನುಗ್ಗಿದ ಆರೋಪಿಗಳಾದ ಇಮ್ತಿಯಾಝ್, ವಿನೋದ್ ಹಾಗೂ ಮತ್ತಿಬ್ಬರು ಅಶೋಕ್ ಅವರ ಮೇಲೆ ಹಲ್ಲೆ ನಡೆಸಿ ಜೀವ ಬೆದರಿಕೆ […]

ಅರಣ್ಯ ಇಲಾಖೆಯ ಸಸಿಗಳಿಗೆ ಪರಿಷ್ಕೃತ ದರ ನಿಗದಿ

ಉಡುಪಿ: ಸಾರ್ವಜನಿಕರ ವಿತರಣೆಗಾಗಿ ಅರಣ್ಯ ಇಲಾಖೆಯ ಎಲ್ಲಾ ಯೋಜನೆಗಳ ಅಡಿಯಲ್ಲಿ ಬೆಳೆಸಲಾಗುವ ಸಸಿಗಳು ಹಾಗೂ ಕಸಿ ಮಾಡಿದ ಸಸಿಗಳನ್ನು ಮಾರಾಟ ಮಾಡಲು 5*8 ಗಾತ್ರಕ್ಕೆ 2 ರೂ., 6*9 ಗಾತ್ರಕ್ಕೆ 3 ರೂ ಹಾಗೂ 8*12 ಗಾತ್ರಕ್ಕೆ 6 ರೂ. ನಂತೆ ಪರಿಷ್ಕೃತ ದರವನ್ನು ನಿಗದಿಪಡಿಸಲಾಗಿರುತ್ತದೆ. ಜಿಲ್ಲೆಯ ಸಾಮಾಜಿಕ ಅರಣ್ಯ ವಿಭಾಗದಿಂದ ಪ್ರಸಕ್ತ ಸಾಲಿನಲ್ಲಿ ವಿವಿಧ ಜಾತಿ ಮತ್ತು ಅಳತೆಯ ಗಿಡಗಳನ್ನು ಸಾರ್ವಜನಿಕ ವಿತರಣೆಗಾಗಿ ಕಾರ್ಕಳ, ಕುಂದಾಪುರ ಹಾಗೂ ಉಡುಪಿ ಸಾಮಾಜಿಕ ಅರಣ್ಯ ವಲಯದ ವಿವಿಧ ಸಸ್ಯಕ್ಷೇತ್ರಗಳಲ್ಲಿ […]

ಕಡಂದಲೆಯಲ್ಲಿ ವಿದ್ಯುತ್ ಕೇಂದ್ರ ಸ್ಥಾಪನೆಗೆ 2229 ಮರಗಳ ತೆರವು: ಅಹವಾಲು ಸಭೆ

ಉಡುಪಿ: ಮೂಡಬಿದ್ರೆ ತಾಲೂಕು ಕಡಂದಲೆ ಗ್ರಾಮದ ಸ.ನಂ. 308/ಪಿ1 ರಲ್ಲಿ ವಿದ್ಯುತ್ ಕೇಂದ್ರದ ಸ್ಥಾಪನೆಗಾಗಿ ಕಾಯ್ದಿರಿಸಿದ ಸ್ಥಳದಲ್ಲಿನ ಒಟ್ಟು 2229 ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, ಫೆಬ್ರವರಿ 20 ರಂದು ಬೆಳಗ್ಗೆ 11 ಗಂಟೆಗೆ ಮೂಡಬಿದ್ರೆ ವಲಯ ಅರಣ್ಯಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ ಇವರಿಗೆ ಲಿಖಿತ ರೂಪದಲ್ಲಿ ಅಥವಾ […]

ಅವಿಭಜಿತ ದ.ಕ ಜಿಲ್ಲೆಯ ಸಾರ್ವಜನಿಕರ ಅತ್ಯುತ್ತಮ ಸಹಕಾರದಿಂದ ಅರಣ್ಯ ಸಂಪತ್ತಿನ ರಕ್ಷಣೆ: ಗಣಪತಿ ಕೆ

ಉಡುಪಿ: ಉಡುಪಿ ಮತ್ತು ದ.ಕನ್ನಡ ಜಿಲ್ಲೆಯಲ್ಲಿ ಅರಣ್ಯ ಮತ್ತು ವನ್ಯಜೀವಿ ಸಂಪತ್ತು ರಕ್ಷಣೆಯಲ್ಲಿ ಅರಣ್ಯ ಇಲಾಖೆಗೆ ಸಾರ್ವಜನಿಕರು ಅತ್ಯುತ್ತಮ ರೀತಿಯಲ್ಲಿ ಸಹಕಾರ ನೀಡುತ್ತಿದ್ದು, ಇದರಿಂದ ಇಲಾಖೆಯು ಉತ್ತಮವಾಗಿ ಕಾರ್ಯ ನಿರ್ವಹಿಸಲು ಸಾಧ್ಯವಾಗುತ್ತಿದೆ ಎಂದು ಕಾರ್ಕಳ ವನ್ಯಜೀವಿ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಗಣಪತಿ ಹೇಳಿದರು. ಅವರು ಭಾನುವಾರದಂದು ನಗರದ ಕಿದಿಯೂರು ಹೋಟೆಲ್‍ನ ರೂಫ್ ಟಾಪ್ ಸಭಾಂಗಣದಲ್ಲಿ, ಕರ್ನಾಟಕ ರಾಜ್ಯ ಉಪ ವಲಯ ಅರಣ್ಯಾಧಿಕಾರಿಗಳ ಸಂಘ (ರಿ) ಉಡುಪಿ ಜಿಲ್ಲೆ ಇವರ ವತಿಯಿಂದ ವಾರ್ಷಿಕ ಸಮಾರಂಭ, ನೂತನ ವರ್ಷದ […]

ಪಶ್ಚಿಮಘಟ್ಟ ತಪ್ಪಲಿನ ಔಷಧೀಯ ಸಸ್ಯಗಳ ಬೆಳೆಗೆ ಸರ್ವ ಸಹಕಾರ: ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ

ಉಡುಪಿ: ಉಡುಪಿ, ದಕ್ಷಿಣ ಕನ್ನಡ ಮತ್ತು ಕಾಸರಗೋಡು ಜಿಲ್ಲೆಗಳಲ್ಲಿ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿರುವ ಎಲ್ಲಾ ಕ್ಯಾಂಪ್ಕೋ ಸದಸ್ಯರ ಮೂಲಕ ಪಶ್ಚಿಮಘಟ್ಟ ತಪ್ಪಲಿನ ಔಷಧೀಯ ಸಸ್ಯಗಳ ಬೆಳೆಗೆ ಎಲ್ಲಾ ರೀತಿಯ ಅಗತ್ಯ ಪ್ರೋತ್ಸಾಹ ನೀಡುವುದಾಗಿ ಕ್ಯಾಂಪ್ಕೋ ಅಧ್ಯಕ್ಷ ಕಿಶೋರ್ ಕೊಡ್ಗಿ ಹೇಳಿದರು. ಅವರು ಗುರುವಾರ ಕಾರ್ಕಳ ತಾಲೂಕು ಬಜಗೋಳಿಯ ತ್ರಿಭುವನ ಮಾಳದಲ್ಲಿ, ಕರ್ನಾಟಕ ರಾಜ್ಯ ಔಷಧಿ ಗಿಡಮೂಲಿಕಾ ಪ್ರಾಧಿಕಾರ, ಕರ್ನಾಟಕ ಜೀವವೈವಿಧ್ಯ ಮಂಡಳಿ ಹಾಗೂ ಕಾಂಪ್ಕೋ ಮಂಗಳೂರು ಇವರ ಸಹಯೋಗದಲ್ಲಿ ರಾಷ್ಟ್ರೀಯ ಔಷಧಿ ಗಿಡಮೂಲಿಕಾ ಮಂಡಳಿ ಪ್ರಾಯೋಜಿತ ಯೋಜನೆ […]