6.60 ಲಕ್ಷ ಹೆಕ್ಟೇರ್ ಭೂಮಿ ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಹೊರಗೆ: ಉಮೇಶ್ ಕತ್ತಿ
ಉಡುಪಿ: ರಾಜ್ಯದ ಮಲೆನಾಡು ಮತ್ತು ಕರಾವಳಿ ಭಾಗದಲ್ಲಿನ ರೈತರಿಗೆ, ಸಾರ್ವಜನಿಕರಿಗೆ ಮತ್ತು ಸರ್ಕಾರಕ್ಕೆ ವಿವಿಧ ಹೊಸ ಅಭಿವೃದ್ಧಿ ಕಾರ್ಯಗಳನ್ನು ಕೈಗೊಳ್ಳಲು ತೀವ್ರ ತೊಡಕಾಗಿದ್ದ ಡೀಮ್ಡ್ ಫಾರೆಸ್ಟ್ ಸಮಸ್ಯೆಯನ್ನು ಸರ್ಕಾರವು ಪ್ರಸ್ತುತ ಬಗೆಹರಿಸಿದ್ದು, 6.60 ಲಕ್ಷ ಹೆಕ್ಟೇರ್ ಭೂಮಿಯನ್ನು ಡೀಮ್ಡ್ ಫಾರೆಸ್ಟ್ ವ್ಯಾಪ್ತಿಯಿಂದ ಹೊರತುಪಡಿಸಿ, ಸರ್ಕಾರಿ ಆದೇಶ ಹೊರಡಿಸಿದೆ ಎಂದು ರಾಜ್ಯದ ಅರಣ್ಯ ಆಹಾರ ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಸಚಿವ ಉಮೇಶ್ ಕತ್ತಿ ಹೇಳಿದರು. ಅವರು ಬ್ರಹ್ಮಾವರದ ನೀಲಾವರದಲ್ಲಿ ಅರಣ್ಯ ಇಲಾಖೆ ಹಾಗೂ ಶ್ರೀ ಪೇಜಾವರ […]
ಶ್ರೀಕೃಷ್ಣಮಠಕ್ಕೆ ಭೇಟಿ ನೀಡಿದ ಅರಣ್ಯ ಸಚಿವ ಉಮೇಶ್ ಕತ್ತಿ
ಉಡುಪಿ: ಶ್ರೀಕೃಷ್ಣಮಠಕ್ಕೆ ಕರ್ನಾಟಕ ರಾಜ್ಯ ಅರಣ್ಯ ಇಲಾಖೆ ಸಚಿವ ಉಮೇಶ್ ಕತ್ತಿ ಆಗಮಿಸಿ ದೇವರ ದರ್ಶನ ಪಡೆದು, ಪರ್ಯಾಯ ಕೃಷ್ಣಾಪುರ ಮಠಾಧೀಶರಾದ ಶ್ರೀವಿದ್ಯಾಸಾಗರತೀರ್ಥ ಶ್ರೀಪಾದರಿಂದ ಅನುಗ್ರಹ ಮಂತ್ರಾಕ್ಷತೆ ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಡುಪಿ ಶಾಸಕರಾದ ರಘುಪತಿ ಭಟ್ ಹಾಗೂ ಪರ್ಯಾಯ ಮಠದ ದಿವಾನರಾದ ವರದರಾಜ ಭಟ್ ಮೊದಲಾದವರು ಉಪಸ್ಥಿತರಿದ್ದರು.