ರಾಷ್ಟ್ರೀಯ ಹೆದ್ದಾರಿಗಾಗಿ ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ
ಉಡುಪಿ: ಹೆಬ್ರಿ-ಪರ್ಕಳ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿ ಕಾಮಗಾರಿಗೆ ಸಂಬಂಧಿಸಿದಂತೆ, ಹಿರಿಯಡಕ ಘಟಕ ವ್ಯಾಪ್ತಿಯ ಬೊಮ್ಮರಬೆಟ್ಟು ಗ್ರಾಮದ ಆತ್ರಾಡಿ ವರೆಗೆ ರಸ್ತೆ ಕಾಮಗಾರಿಗೆ ಅಡಚಣೆಯಾಗುವ 997 ವಿವಿಧ ಜಾತಿಯ ಮರಗಳನ್ನು ತೆರವುಗೊಳಿಸುವ ಹಿನ್ನೆಲೆ, 2023 ಜನವರಿ 7 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆ ನಡೆಯಲಿದೆ. ಈ ಕುರಿತು ಆಕ್ಷೇಪಣೆಗಳಿದ್ದಲ್ಲಿ ಸಾರ್ವಜನಿಕರು ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗೆ ವೃಕ್ಷ ಅಧಿಕಾರಿ ಹಾಗೂಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ […]
ತನ್ನ ನಾಲ್ಕು ಮರಿಗಳ ಜೊತೆ ಸತ್ತ ಸಹೋದರಿಯ ಮೂರು ಮರಿಗಳನ್ನೂ ಸಾಕುತ್ತಿರುವ ಹುಲಿಯಮ್ಮ: ಕಾನನದಲ್ಲೊಂದು ಅಪರೂಪದ ಬಂಧನ!
ಸಾಮಾನ್ಯವಾಗಿ ಪ್ರಾಣಿಗಳು ಮನುಷ್ಯರಂತೆ ಕುಟುಂಬ ವ್ಯವಸ್ಥೆಯನ್ನು ಹೊಂದಿರುವುದಿಲ್ಲ. ಮನುಷ್ಯನಂತೆ ಪ್ರಾಣಿಗಳಿಗೆ ಸಂಸಾರದ ಬಂಧನವಿಲ್ಲ. ಪ್ರಾಣಿ ಪ್ರಪಂಚದಲ್ಲಿ ಮಕ್ಕಳ ಲಾಲನೆ ಪಾಲನೆ ಎಲ್ಲವೂ ಹೆತ್ತಮ್ಮನದ್ದೇ ಆಗಿರುತ್ತದೆ. ಮರಿಯು ತನ್ನ ಕಾಲ ಮೇಲೆ ತಾನು ನಿಂತುಕೊಳ್ಳುವವರೆಗೂ ಅದರ ರಕ್ಷಣೆಯ ಜವಾಬ್ದಾರಿ ಹೊರುವ ತಾಯಿ, ಮರಿ ಸ್ವಾವಲಂಬಿ ಆದ ತಕ್ಷಣ ಅದನ್ನು ಅದರ ಪಾಡಿಗೆ ಬಿಟ್ಟು ಬಿಡುತ್ತದೆ. ಒಂದು ವೇಳೆ ತಾಯಿ ಸತ್ತು ಹೋಯಿತೆಂದರೆ ಆ ಮರಿಯ ಜವಾಬ್ದಾರಿ ಅದರದ್ದೇ ಆಗಿರುತ್ತದೆ. ಆದರೆ, ಕಾಡಿನಲ್ಲೊಂದು ಅಪರೂಪದ ಘಟನೆ ನಡೆದಿದೆ. ಇಲ್ಲಿ ತನ್ನ […]