ಬಿಹಾರದ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಗೆ ಜಾಮೀನು ಮಂಜೂರು: ಆದರೂ ಬಿಡುಗಡೆ ಭಾಗ್ಯವಿಲ್ಲ
ರಾಂಚಿ: ಬಹುಕೋಟಿ ಮೇವು ಹಗರಣದ ಚಾಯಿಬಾಸಾ ಅವ್ಯವಹಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಆರ್‌ಜೆಡಿ ಪಕ್ಷದ ನಾಯಕ, ಬಿಹಾರ ಮಾಜಿ ಸಿಎಂ ಲಾಲು ಪ್ರಸಾದ್ ಯಾದವ್ ಅವರಿಗೆ ಜಾರ್ಖಂಡ್ ಹೈಕೋರ್ಟ್ ಶುಕ್ರವಾರ ಜಾಮೀನು ಮಂಜೂರು ಮಾಡಿದೆ. ಲಾಲು ಅವರಿಗೆ ಈ ಪ್ರಕರಣದಲ್ಲಿ ಜಾಮೀನು ಸಿಕ್ಕಿದರೂ ಜೈಲುವಾಸ ಮುಂದುವರಿಯಲಿದೆ. ಲಾಲು ಹಲವು ಪ್ರಕರಣಗಳಲ್ಲಿ ದೋಷಿಯಾಗಿದ್ದು, ದುಮ್ಕಾ ಖಜಾನೆ ಪ್ರಕರಣದ ವಿಚಾರಣೆ ಇನ್ನೂ ಬಾಕಿ ಇರುವುದರಿಂದ ಅವರು ಜೈಲಿನಲ್ಲಿಯೇ ಇರಬೇಕಾಗಿದೆ. 1992–93ರಲ್ಲಿ ಚಾಯಿಬಾಸಾ ಖಜಾನೆಯಿಂದ ₹33.67 ಕೋಟಿ ಹಣವನ್ನು ಅಕ್ರಮವಾಗಿ ಪಡೆದ ಪ್ರಕರಣಕ್ಕೆ ಸಂಬಂಧಿಸಿದಂತೆ […]