ನಾಳೆ ಮಾಜಿ ಸಿಎಂ ಸಿದ್ದರಾಮಯ್ಯ ಉಡುಪಿಗೆ ಭೇಟಿ
ಉಡುಪಿ: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ (ಫೆ.22) ಉಡುಪಿ ಜಿಲ್ಲೆಗೆ ಭೇಟಿ ನೀಡಲಿದ್ದು, ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ಪಡುಬಿದ್ರಿ ಪೇಟೆಯಲ್ಲಿ ನಾಳೆ ಬೆಳಿಗ್ಗೆ 11.30ಕ್ಕೆ ಹಮ್ಮಿಕೊಂಡಿರುವ ‘ಜನಧ್ವನಿ ಪಾದಯಾತ್ರೆ’ಯ ಸಾರ್ವಜನಿಕ ಸಭೆಯಲ್ಲಿ ಅವರು ಭಾಗವಹಿಸುವರು. ಬಳಿಕ ಪರ್ಕಳ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಲಿದ್ದು, ಕಾರ್ಯಕರ್ತರೊಂದಿಗೆ ಸಮಾಲೋಚನೆ ನಡೆಸಲಿದ್ದಾರೆ.