ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ನಾಳೆ ಕಾಂಗ್ರೆಸ್ ಸೇರ್ಪಡೆ
ಚೆನ್ನೈ: ಮಾಜಿ ಐಎಎಸ್ ಅಧಿಕಾರಿ ಸಸಿಕಾಂತ್ ಸೆಂಥಿಲ್ ಅವರು ಸೋಮವಾರ ಕಾಂಗ್ರೆಸ್ ಪಕ್ಷ ಸೇರಲಿದ್ದಾರೆ. ಸೆಂಥಿಲ್ ಅವರು ನಾಳೆ ತಮಿಳುನಾಡು ಕಾಂಗ್ರೆಸ್ ಸಮಿತಿ (ಟಿಎನ್‌ಸಿಸಿ) ಸೇರಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಎಐಸಿಸಿಯ ತಮಿಳುನಾಡು ಉಸ್ತುವಾರಿ ದಿನೇಶ್ ಗುಂಡೂರಾವ್ ಅವರು ಸೆಂಥಿಲ್ ಅವರನ್ನು ಪಕ್ಷಕ್ಕೆ ಕರೆತರುವಲ್ಲಿ ಪ್ರಮುಖ ಪಾತ್ರವಹಿಸಿದ್ದಾರೆ ಎನ್ನಲಾಗಿದೆ. ಕರ್ನಾಟಕ ಕೇಡರ್‌ನ ಅಧಿಕಾರಿಯಾಗಿದ್ದ ಅವರು, ರಾಜ್ಯದಲ್ಲಿ 2017ರ ಅಕ್ಟೋಬರ್ 10ರಿಂದ ದಕ್ಷಿಣ ಕನ್ನಡ ಜಿಲ್ಲಾಧಿಕಾರಿಯಾಗಿದ್ದ ಅವರು 2019ರ ಸೆಪ್ಟೆಂಬರ್ 6ರಂದು ರಾಜೀನಾಮೆ ನೀಡಿದ್ದರು.