ಮಾಜಿ ಕಂಬಳ ಓಟಗಾರ ಕಕ್ಯಪದವು ಜಯ ಶೆಟ್ಟಿ ನಿಧನ

ಪುಂಜಾಲಕಟ್ಟೆ: ಮಾಜಿ ಕಂಬಳ ಓಟಗಾರ, ಧಾರ್ಮಿಕ, ಸಹಕಾರಿ ಮುಂದಾಳು ಉಳಿಗ್ರಾಮದ ಕಕ್ಯಪದವು ಕಿಂಜಾಲು ನಿವಾಸಿ ಜಯ  ಶೆಟ್ಟಿ  ಕಿಂಜಾಲು (65) ಅವರು ಅಸೌಖ್ಯದಿಂದ ಭಾನುವಾರ ಮಂಗಳೂರು ಖಾಸಗಿ ಆಸ್ಪತ್ರೆಯಲ್ಲಿ ನಿಧನ ಹೊಂದಿದರು. ಮೃತರು ಪತ್ನಿ, ಮೂವರು ಪುತ್ರಿಯರನ್ನು ಅಗಲಿದ್ದಾರೆ. ಕಂಬಳಕ್ಷೇತ್ರದಲ್ಲಿ ಓಟಗಾರರರಾಗಿ ಪ್ರಖ್ಯಾತಿ ಪಡೆದಿದ್ದ ಅವರು ಕಂಬಳ ಕ್ಷೇತ್ರದ ಅದ್ವಿತೀಯ ಸಾಧನೆಗಾಗಿ ಹಲವಾರು ಪ್ರಶಸ್ತಿ, ಸಮ್ಮಾನ ಪಡೆದಿದ್ದರು. ಸುಮಾರು 70 ರ ದಶಕದ ಆರಂಭದಲ್ಲಿ ಕಕ್ಯಪದವು ಡೀಕಯ್ಯ ಪೂಜಾರಿ, ಪುಣ್ಕೆದಡಿ ಅಣ್ಣು ಭಂಡಾರಿ ಅವರ ಕೋಣಗಳನ್ನು ಓಡಿಸುತ್ತಿದ್ದ […]