ಮಾಜಿ ಸಚಿವ, ಕಾಂಗ್ರೆಸ್‌ ಮುಖಂಡ ಡಾ. ವೈ. ನಾಗಪ್ಪ ನಿಧನ

ಹರಿಹರ: ಮಾಜಿ ಸಚಿವ, ಕಾಂಗ್ರೆಸ್‌ ಮುಖಂಡ ಡಾ. ವೈ.ನಾಗಪ್ಪ (87) ಅವರು ಅನಾರೋಗ್ಯದಿಂದ ಮಂಗಳವಾರ ನಿಧನ ಹೊಂದಿದರು. ಹರಿಹರ ವಿಧಾನಸಭಾ ಕ್ಷೇತ್ರದಿಂದ 1989, 1999 ಹಾಗೂ 2004ರಲ್ಲಿ ನಾಗಪ್ಪ ಅವರು ಶಾಸಕರಾಗಿ ಆಯ್ಕೆಯಾಗಿದ್ದರು. 2004ರಲ್ಲಿ ಧರ್ಮಸಿಂಗ್‌ ನೇತೃತ್ವದ ಕಾಂಗ್ರೆಸ್‌–ಜೆಡಿಎಸ್‌ ಸಮ್ಮಿಶ್ರ ಸರ್ಕಾರದಲ್ಲಿ ನಾಗಪ್ಪ ಅವರು ಸಮಾಜ ಕಲ್ಯಾಣ ಸಚಿವರಾಗಿ ಕಾರ್ಯನಿರ್ವಹಿಸಿದ್ದರು. ಅವರು ಆರು ಬಾರಿ ಚುನಾವಣೆಗೆ ಸ್ಪರ್ಧಿಸಿದ್ದರು. 2008ರ ಚುನಾವಣೆಯಲ್ಲಿ ಸೋತ ಬಳಿಕ ರಾಜಕೀಯದಿಂದ ದೂರ ಉಳಿದಿದ್ದರು. ಅವರಿಗೆ ಒಬ್ಬ ಪುತ್ರ, ಮೂವರು ಪುತ್ರಿಯರು ಇದ್ದಾರೆ.