ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಹುಟ್ಟುಹಬ್ಬ: ಅ. 17ರಂದು ಬೃಹತ್ ರಕ್ತದಾನ ಶಿಬಿರ
ಉಡುಪಿ: ಪ್ರಮೋದ್ ಮಧ್ವರಾಜ್ ಅಭಿಮಾನಿ ಬಳಗ ಉಡುಪಿ ಜಿಲ್ಲೆ ಇದರ ವತಿಯಿಂದ ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರ ಹುಟ್ಟುಹಬ್ಬದ ಅಂಗವಾಗಿ ‘ಸ್ವಯಂ ಪ್ರೇರಿತ ಬೃಹತ್ ರಕ್ತದಾನ ಶಿಬಿರ’ವನ್ನು ಮಣಿಪಾಲ ಕೆಎಂಸಿ ಆಸ್ಪತ್ರೆಯ ರಕ್ತನಿಧಿ ಕೇಂದ್ರದಲ್ಲಿ ಅಕ್ಟೋಬರ್ 17ರಂದು ಬೆಳಿಗ್ಗೆ 9ಗಂಟೆಯಿಂದ ಮಧ್ಯಾಹ್ನ 2ರ ವರೆಗೆ ಆಯೋಜಿಸಲಾಗಿದೆ. ಮಾಜಿ ಸಚಿವ ಪ್ರಮೋದ್ ಮಧ್ವರಾಜ್ ಅವರು ಬೆಳಿಗ್ಗೆ 11ಗಂಟೆಗೆ ರಕ್ತದಾನ ಶಿಬಿರವನ್ನು ಉದ್ಘಾಟಿಸುವರು ಎಂದು ಅಭಿಮಾನಿ ಬಳಗದ ಪ್ರಕಟಣೆ ತಿಳಿಸಿದೆ.