ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನದಲ್ಲಿ ಕೇಂದ್ರ, ರಾಜ್ಯ ನಾಯಕರ ಕೈವಾಡವಿದೆ: ಜಯಮೃತ್ಯುಂಜಯ ಸ್ವಾಮೀಜಿ
ಬೆಂಗಳೂರು: ಮಾಜಿ ಸಚಿವ ವಿನಯ್ ಕುಲಕರ್ಣಿ ಬಂಧನದಲ್ಲಿ ಕೇಂದ್ರ ಹಾಗೂ ರಾಜ್ಯ ನಾಯಕರ ಕೈವಾಡ ಇದೆ ಎಂದು ಪಂಚಮಸಾಲಿ ಮಠದ ಜಯಮೃತ್ಯುಂಜಯ ಸ್ವಾಮೀಜಿ ಆರೋಪಿಸಿದ್ದಾರೆ. ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಿಪಂ ಸದಸ್ಯ ಯೋಗಿಶ್ ಗೌಡ ಕೊಲೆ ಪ್ರಕರಣದಲ್ಲಿ ಅಪರಾಧಿಯಲ್ಲದಿದ್ದರೂ ವಿನಯ್ ಕುಲಕರ್ಣಿ ಅವರನ್ನು ವಿಚಾರಣೆಗೆ ಒಳಪಡಿಸುವುದು ಸರಿಯಲ್ಲ. ಮುಖ್ಯ ಮಂತ್ರಿಗಳು ಈ ವಿಚಾರ ಕುರಿತು ಸಕಾರತಾತ್ಮಕ ನಿರ್ಧಾರ ಕೈಗೊಳ್ಳಬೇಕು ಎಂದರು. ಲಿಂಗಾಯತ ಸಮಾಜದ ಮುಖಂಡರೊಬ್ಬರನ್ನು ಸಿಬಿಐ ಪೋಲಿಸರು ಬಂದಿಸಿರುವುದು ಖಂಡನೀಯ. ವಿನಯ್ ಕುಲಕರ್ಣಿ ಅವರನ್ನು […]