ಮಾಜಿ ಸಚಿವ ವಿನಯಕುಮಾರ್ ಸೊರಕೆ ಕೆಪಿಸಿಸಿ ವಕ್ತಾರರಾಗಿ ನೇಮಕ
ಉಡುಪಿ: ಮಾಜಿ ಸಚಿವ ವಿನಯಕುಮಾರ್ ಸೊರಕೆ ಅವರನ್ನು ಕೆಪಿಸಿಸಿ ವಕ್ತಾರರನ್ನಾಗಿ ನೇಮಕ ಮಾಡಿ ಜಿಲ್ಲೆಯಲ್ಲಿ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಆದೇಶ ಹೊರಡಿಸಿದ್ದಾರೆ. ಸಾಕಷ್ಟು ಅನುಭವವಿರುವ ಮಾಜಿ ಸಚಿವ ಸೊರಕೆಯವರಿಗೆ ವಿಷಯವನ್ನು ಸಮರ್ಥವಾಗಿ ಮಂಡಿಸುವ ಸಾಮರ್ಥ್ಯವಿದೆ ಎನ್ನುವುದನ್ನು ಗಮನಿಸಿ ನಿಮ್ಮನ್ನು ಕೆಪಿಸಿಸಿ ವಕ್ತಾರರಾಗಿ ನೇಮಕ ಮಾಡಲಾಗಿದೆ ಎಂದು ನೇಮಕ ಆದೇಶ ಪ್ರತಿಯಲ್ಲಿ ಡಿಕೆಶಿ ತಿಳಿಸಿದ್ದಾರೆ. ಜಿಲ್ಲೆಯಲ್ಲಿ ಪಕ್ಷದೊಳಗಿರುವ ಆಂತರಿಕ ಕಲಹದಿಂದಾಗಿ ಸದ್ಯ ಕಾಂಗ್ರೆಸ್ ಸಂಘಟನೆಯಲ್ಲಿ ದುರ್ಬಲವಾಗಿದೆ. ನಾಯಕರೊಳಗಿನ ಮುಸುಕಿನ ಗುದ್ದಾಟದಿಂದ ನಾಯಕರ ನಡುವೆ ಸಮನ್ವಯತೆ ಇಲ್ಲದಾಗಿದೆ. ಈ […]