ಮಾಜಿ ಶಾಸಕ ಉರಿಮಜಲು ಕೆ.ರಾಮ್ ಭಟ್ ನಿಧನ; ಪೇಜಾವರ ಶ್ರೀ ಸಹಿತ ಗಣ್ಯರಿಂದ ಸಂತಾಪ

ಮಂಗಳೂರು: ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಉರಿಮಜಲು ಕೆ.ರಾಮ್ ಭಟ್ (92) ಅವರು ಸೋಮವಾರ ನಿಧನರಾದರು. ವಿಧಿ ವಶರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಕೆಲವು ದಿನಗಳ ಹಿಂದೆಯಷ್ಟೇ ಮಂಗಳೂರಿನ ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿ ಚೇತರಿಸಿಕೊಂಡು ಮನೆಗೆ ಮರಳಿದ್ದರು. ಆದರೆ, ಇಂದು ಕೊಂಬೆಟ್ಟಿನಲ್ಲಿರುವ ಅವರ ನಿವಾಸದಲ್ಲಿ ಕೊನೆಯುಸಿರೆಳೆದಿದ್ದಾರೆ. ವಕೀಲರಾಗಿ ವೃತ್ತಿ ಜೀವನ ಆರಂಭಿಸಿದ ರಾಮ್ ಭಟ್, ಜನಸಂಘದ ನಾಯಕರಾಗಿ ರಾಜಕಾರಣಿಯಾಗಿ ಗುರುತಿಸಿಕೊಂಡಿದ್ದರು. ಪುತ್ತೂರು ಪುರಸಭೆಯ ಅಧ್ಯಕ್ಷ, ಕ್ಯಾಂಪ್ಕೋ ಅಧ್ಯಕ್ಷರಾಗಿದ್ದರು. 1978 ಮತ್ತು 1983 ರಲ್ಲಿ ಪುತ್ತೂರು […]