ಉಡುಪಿ: ಮೂರು ಲಕ್ಷ ರೂ. ಪಡೆದು ವಂಚಿಸಿದ ಮಾಜಿ ಶಾಸಕ ಯು.ಆರ್. ಸಭಾಪತಿ: ಕಾಂಗ್ರೆಸ್ ಕಾರ್ಯಕರ್ತನಿಂದ ಆರೋಪ

ಉಡುಪಿ: ಉಡುಪಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ ಯು.ಆರ್. ಸಭಾಪತಿ ಅವರು ಕಳೆದ ವರ್ಷ ಫೆಬ್ರವರಿಯಲ್ಲಿ ನನ್ನಿಂದ ಮೂರು ಲಕ್ಷ ರೂ. ಪಡೆದಿದ್ದರು. ಆದರೆ ಇದೀಗ ಅದನ್ನು ಮರುಪಾವತಿ ಮಾಡದೆ ವಂಚಿಸುತ್ತಿದ್ದಾರೆ ಎಂದು ಮಂಡ್ಯ ಜಿಲ್ಲೆಯ ಮೊಳೆ ಕೊಪ್ಪಲು ನಿವಾಸಿ ಕಾಂಗ್ರೆಸ್ ಕಾರ್ಯಕರ್ತ ಚಿಕ್ಕಮಂಚಯ್ಯ ಆರೋಪಿಸಿದ್ದಾರೆ. ಇಂದು ಉಡುಪಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಭಾಪತಿ ತನ್ನ ಮನೆಗೆ ಆಗಮಿಸಿ, ‘ನನ್ನ ಮೇಲೆ ಚೆಕ್ ಬೌನ್ಸ್ ಕೇಸ್ ದಾಖಲಾಗಿದೆ. ಜೈಲಿಗೆ ಹೋಗುವ ಪರಿಸ್ಥಿತಿ ಬಂದಿದೆ. ಮೂರು ಲಕ್ಷಕೊಟ್ಟು ನನ್ನ […]