ಕೇಂದ್ರದ ಮಾಜಿ ಸಚಿವ ಜಸ್ವಂತ್ ಸಿಂಗ್ ನಿಧನ
ನವದೆಹಲಿ: ಕೇಂದ್ರದ ಮಾಜಿ ಸಚಿವ ಹಾಗೂ ಬಿಜೆಪಿ ಸಹ ಸಂಸ್ಥಾಪಕರಲ್ಲಿ ಒಬ್ಬರಾಗಿದ್ದ ಜಸ್ವಂತ್ ಸಿಂಗ್ (82) ಇಂದು ಮುಂಜಾನೆ ಹೃದಯಾಘಾತದಿಂದ ನಿಧನ ಹೊಂದಿದರು. ಅನಾರೋಗ್ಯದಿಂದ ಬಳಲುತ್ತಿದ್ದ ಜಸ್ವಂತ್ ಸಿಂಗ್ ಅವರು ಜೂನ್ 25 ರಂದು ಆಸ್ಪತ್ರೆಗೆ ದಾಖಲಾಗಿದ್ದರು. ಬಹುಅಂಗಾಂಗ ವೈಫಲ್ಯದಿಂದ ಬಳಸುತ್ತಿದ್ದ ಅವರಿಗೆ, ತಲೆಯಲ್ಲಿನ ಗಾಯವು ತೀವ್ರ ಸ್ವರೂಪ ಪಡೆದಿತ್ತು. ಇಂದು ಬೆಳಿಗ್ಗೆ ಅವರಿಗೆ ಹೃದಯ ಸ್ತಂಭನವಾಗಿ ಕೊನೆಯುಸಿರೆಳೆದರು ಎಂದು ದೆಹಲಿಯ ಸೇನಾ ಆಸ್ಪತ್ರೆ ತಿಳಿಸಿದೆ. ರಾಜಸ್ಥಾನ ಮೂಲದ ಜಸ್ವಂತ್ ಸಿಂಗ್ ಅವರು ಭಾರತದ ವಿದೇಶಾಂಗ ಇಲಾಖೆ, […]