ಪುತ್ತಿಗೆ ಮಠ, ಗುರ್ಮೆ ಫೌಂಡೇಶನ್ ವತಿಯಿಂದ ನಾಲ್ಕು ಆ್ಯಂಬುಲೆನ್ಸ್ ಹಸ್ತಾಂತರ

ಕಾಪು: ಪುತ್ತಿಗೆ ಮಠ ಹಾಗೂ ಗುರ್ಮೆ ಫೌಂಡೇಶನ್ ವತಿಯಿಂದ ಕೊರೊನಾ ತುರ್ತು ಚಿಕಿತ್ಸೆಗಾಗಿ ನೀಡಿರುವ ನಾಲ್ಕು ಆ್ಯಂಬುಲೆನ್ಸ್ ಗಳ ಹಸ್ತಾಂತರ ಕಾರ್ಯಕ್ರಮ ಕಾಪುವಿನ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಇಂದು ನಡೆಯಿತು. ಆ್ಯಂಬುಲೆನ್ಸ್ ಗೆ ಚಾಲನೆ ನೀಡಿ ಮಾತನಾಡಿದ ಪುತ್ತಿಗೆ ಮಠಾಧೀಶ ಸುಗುಣೇಂದ್ರತೀರ್ಥರು, ಕೊರೊನಾ ಸಮಸ್ಯೆಯಿಂದಾಗಿ ಮನುಕುಲ ತತ್ತರಿಸಿ ಹೋಗಿದೆ‌‌. ಆಕಸ್ಮಿಕವೋ ಅಥವಾ ವ್ಯವಸ್ಥಿತ ಪಿತೂರಿಯೋ ಅರಿಯದೇ ಭಾರತ ಕೊರೊನಾದಿಂದ ಮುಕ್ತವಾಗಲು ಹೆಣಗಾಡುತ್ತಿದೆ. ಇಂತಹ ಕಠಿಣ ಸಮಯದಲ್ಲಿ ಉಳ್ಳವರು ಸೇವೆ ನೀಡಬೇಕು. ನಾವೆಲ್ಲರೂ ಒಟ್ಟಾಗಿ ಸೇವೆ ಮಾಡೋಣ ಎಂದು […]