ವಿದ್ಯಾರ್ಥಿಗಳಿಗೆ ನಾಲ್ಕು ತಿಂಗಳು ಉಚಿತ ಇಂಟರ್ ನೆಟ್
ಚೆನ್ನೈ: ಏಪ್ರಿಲ್ ನಲ್ಲಿ ಪರೀಕ್ಷೆ ನಡೆಯಲಿರುವ ಹಿನ್ನೆಲೆಯಲ್ಲಿ ತಮಿಳುನಾಡಿನ ವಿದ್ಯಾರ್ಥಿಗಳಿಗೆ ಆನ್ ಲೈನ್ ಕ್ಲಾಸ್ ಗೆ ಅನುಕೂಲವಾಗುವ ಸಲುವಾಗಿ ತಮಿಳುನಾಡು ಸರ್ಕಾರ ಉಚಿತ ಇಂಟರ್ ನೆಟ್ ಸೌಲಭ್ಯ ಘೋಷಿಸಿದೆ. ಈ ಯೋಜನೆಯಂತೆ ಪ್ರತಿದಿನ ವಿದ್ಯಾರ್ಥಿಗಳಿಗೆ ಉಚಿತವಾಗಿ 2ಜಿಬಿ ಡಾಟಾ ಲಭ್ಯವಾಗಲಿದೆ. ವಿದ್ಯಾರ್ಥಿಗಳಿಗೆ ನಾಲ್ಕು ತಿಂಗಳ ಕಾಲ ಉಚಿತ ಇಂಟರ್ ನೆಟ್ ಸೇವೆ ದೊರೆಯಲಿದೆ.