ನಾಳೆ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ ವೃದ್ಧರಿಗೆ ಉಚಿತ ಕಣ್ಣಿನ ಪೊರೆ ಶಸ್ತ್ರಚಿಕಿತ್ಸೆ
ಉಡುಪಿ: ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿಯವರ ಜನ್ಮ ದಿನಾಚರಣೆಯ ಪ್ರಯುಕ್ತ ಬಿಜೆಪಿ ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಮಣಿಪಾಲದ ಹೊಸಬೆಳಕು ಆಶ್ರಮದಲ್ಲಿ ಇರುವ ಮೂವರು ವೃದ್ಧರಿಗೆ ಉಡುಪಿ ಪ್ರಸಾದ್ ನೇತ್ರಾಲಯ ಸೂಪರ್ ಸ್ಪೆಷಲಿಸ್ಟ್ ಕಣ್ಣಿನ ಆಸ್ಪತ್ರೆಯಲ್ಲಿ ನಾಳೆ (ಡಿ. 25) ಬೆಳಿಗ್ಗೆ 11.30ಕ್ಕೆ ಉಚಿತ ಕಣ್ಣಿನ ಪೊರೆ (cataract) ಶಸ್ತ್ರಚಿಕಿತ್ಸೆ ಮಾಡುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ಜಿಲ್ಲಾ ಮಹಿಳಾ ಮೋರ್ಚಾದ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ತಿಳಿಸಿದ್ದಾರೆ.