ಎಸ್.ಡಿ.ಎಂ ಆಯುರ್ವೇದ ಆಸ್ಪತ್ರೆ ವತಿಯಿಂದ ಗರ್ಭಾಶಯ ಹಾಗೂ ಸ್ತನ ಕ್ಯಾನ್ಸರ್ ಉಚಿತ ತಪಾಸಣಾ ಶಿಬಿರ

ಕುತ್ಪಾಡಿ: ಇಲ್ಲಿನ ಎಸ್.ಡಿ.ಎಂ ಆಯುರ್ವೇದ ಕಾಲೇಜು ಮತ್ತು ಆಸ್ಪತ್ರೆ ವತಿಯಿಂದ ಮಹಿಳೆಯರ ಗರ್ಭಾಶಯ ಕೊರಳಿನ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ಉಚಿತ ತಪಾಸಣಾ ಮತ್ತು ಮಾಹಿತಿ ಶಿಬಿರವನ್ನು ಆಸ್ಪತ್ರೆಯ ಆವರಣದಲ್ಲಿ ಫೆ.1 ರಿಂದ 7 ರವರೆಗೆ ಬೆಳಗ್ಗೆ 9 ರಿಂದ ಸಂಜೆ 5 ರವರೆಗೆ ಹಮ್ಮಿಕೊಳ್ಳಲಾಗಿದ್ದು, ಆಸ್ಪತ್ರೆಯ ಪ್ರಸೂತಿ ತಂತ್ರ ಹಾಗೂ ಸ್ತ್ರೀರೋಗ ವಿಭಾಗದ ತಜ್ಞರು ಭಾಗವಹಿಸಲಿದ್ದಾರೆ. ತಜ್ಞ ವೈದರು ಗರ್ಭಾಶಯ ಕೊರಳಿನ ಕ್ಯಾನ್ಸರ್ ಮತ್ತು ಸ್ತನ ಕ್ಯಾನ್ಸರ್ ನ ಬಗ್ಗೆ ಮಾಹಿತಿಯನ್ನು ನೀಡಲಿದ್ದಾರೆ. ಮಹಿಳೆಯರು ಇದರ […]

ಬಾಲರೋಗ ಮತ್ತು ಪ್ರಸೂತಿತಂತ್ರ ಸ್ತ್ರೀ ರೋಗಗಳ ಉಚಿತ ತಪಾಸಣೆ ಹಾಗೂ ಮಾಹಿತಿ ಶಿಬಿರ

ಮಣಿಪಾಲ: ಮಣಿಪಾಲದ ಇಂಡಸ್ಟ್ರಿಯಲ್ ಏರಿಯಾದಲ್ಲಿರುವ ಮುನಿಯಾಲು ಆಯುರ್ವೇದ ಕಾಲೇಜು ಮತ್ತುಆಸ್ಪತ್ರೆಯ ಬಾಲರೋಗ ಮತ್ತು ಪ್ರಸೂತಿ ತಂತ್ರ ಸ್ತ್ರೀ ರೋಗ ವಿಭಾಗದ ವತಿಯಿಂದ ಮೇ 23 ರಿಂದ 28 ರವರೆಗೆ ಪೂರ್ವಾಹ್ನ9.00 ರಿಂದ ಅಪರಾಹ್ನ4.00 ಘಂಟೆಯವರೆಗೆ ಮಕ್ಕಳ ಮತ್ತು ಸ್ತ್ರೀ ರೋಗಗಳ ಉಚಿತ ತಪಾಸಣೆ, ಹಾಗೂ ಮಾಹಿತಿ ಶಿಬಿರ ನಡೆಯಲಿರುವುದು. ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆಯಬೇಕೆಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.