ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದಿಂದ 1,236 ಫಲಾನುಭವಿಗಳಿಗೆ ಉಚಿತ ಕನ್ನಡಕ ವಿತರಣೆ
ಉಡುಪಿ: ಉಡುಪಿ ಜಿಲ್ಲಾ ಮಹಿಳಾ ಮೋರ್ಚಾದ ವತಿಯಿಂದ ಪ್ರಧಾನಿ ನರೇಂದ್ರ ಮೋದಿಯವರ ಜನ್ಮದಿನದ ಪ್ರಯುಕ್ತ ನಡೆದ ಕಣ್ಣಿನ ತಪಾಸಣೆ ಮತ್ತು 300 ಹೆಚ್ಚು ಶಸ್ತ್ರಚಿಕಿತ್ಸೆ ಮಾಡಲಾಗಿದ್ದು, ಕಣ್ಣಿನ ತಪಾಸಣೆ ಮಾಡಿಸಿಕೊಂಡ 1,236 ಫಲಾನುಭವಿಗಳಿಗೆ ಸಂಸದೆ ಶೋಭಾ ಕರಂದ್ಲಾಜೆ ಉಚಿತ ಕನ್ನಡಕಗಳನ್ನು ಭಾನುವಾರ ಕಡಿಯಾಳಿಯ ಬಿಜೆಪಿ ಕಚೇರಿಯಲ್ಲಿ ವಿತರಿಸಿದರು. ಉಡುಪಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷೆ ವೀಣಾ ಎಸ್. ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಮಹಿಳಾ ಮೋರ್ಚಾ ಮತ್ತು ಪ್ರಸಾದ ನೇತ್ರಾಲಯದ ಸಹಭಾಗಿತ್ವದಲ್ಲಿ ನಡೆದ ಕಾರ್ಯಕ್ರಮಕ್ಕೆ ಸೆಲ್ಯುಲಾರ್ ಫೌಂಡೇಶನ್‌ನ ಸಂಚಾಲಕ ಧರ್ಮಪ್ರಸಾದ ರೈ ಉತ್ತಮ ಗುಣಮಟ್ಟದ ಕನ್ನಡಕವನ್ನು ಉಚಿತವಾಗಿ ನೀಡಿದರು. ಪ್ರಸಾದ ನೇತ್ರಾಲಯದ […]