ಜೂನ್ 21ರಿಂದ 18 ಮೇಲ್ಪಟ್ಟ ಎಲ್ಲರಿಗೂ ಉಚಿತ ಲಸಿಕೆ: 80 ಕೋಟಿ ಮಂದಿಗೆ ನವೆಂಬರ್‌ವರೆಗೆ ಉಚಿತ ರೇಷನ್; ಪ್ರಧಾನಿ ಮೋದಿ ಘೋಷಣೆ
ನವದೆಹಲಿ: ಜೂನ್ 21ರಿಂದ 18 ಮೇಲ್ಪಟ್ಟ ಎಲ್ಲರಿಗೂ ಉಚಿತವಾಗಿ ಲಸಿಕೆ ನೀಡಲಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಘೋಷಿಸಿದ್ದಾರೆ. ದೇಶದ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ಯಾವುದೇ ರಾಜ್ಯ ಸರ್ಕಾರಗಳಿಗೆ ಲಸಿಕಾಕರಣಕ್ಕಾಗಿ ಯಾವುದೇ ಹಣವನ್ನು ಪಾವತಿಸಬೇಕಿಲ್ಲ. ದೇಶದ ಎಲ್ಲ ಜನರಿಗೆ ಕೇಂದ್ರ ಸರ್ಕಾರವೇ ಉಚಿತವಾಗಿ ಲಸಿಕೆಯನ್ನು ನೀಡಲಿದೆ. ಉಚಿತ ಲಸಿಕೆ ಬೇಡ ಎಂದವರಿಗೆ, ಖಾಸಗಿ ಆಸ್ಪತ್ರೆಗಳಲ್ಲಿ ಲಸಿಕೆ ಹಾಕಿಸಿಕೊಳ್ಳುವ ಸಾಮರ್ಥ್ಯ ಇರುವವರಿಗಾಗಿ ಖಾಸಗಿ ಆಸ್ಪತ್ರೆಗಳಿಗೂ ಶೇ.25 ಲಸಿಕೆಗಳನ್ನು ಒದಗಿಸಲಾಗುತ್ತದೆ. ಖಾಸಗಿ ಆಸ್ಪತ್ರೆಯವರು ಗರಿಷ್ಠ 150 ರೂ. ಸೇವಾ […]