ಮೇ 28 ರಂದು ಅಮೃತ ಭಾರತಿಗೆ ಕನ್ನಡದ ಆರತಿ: ಸ್ವಾತಂತ್ರ್ಯ ಸಂಗ್ರಾಮದ ಮೆಲುಕು
ಉಡುಪಿ: 75 ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯದಾದ್ಯಂತ ಸ್ವಾತಂತ್ರ್ಯ ಸಂಗ್ರಾಮದ ನೆನಪುಗಳನ್ನು ಮೆಲುಕು ಹಾಕುವ ‘ಅಮೃತ ಭಾರತಿಗೆ ಕನ್ನಡದ ಆರತಿ’ ಕಾರ್ಯಕ್ರಮವು ಆಂದೋಲನದ ರೀತಿ ನಡೆಯಲಿದೆ ಎಂದು ಇಂಧನ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಸುನಿಲ್ ಕುಮಾರ್ ಹೇಳಿದರು. ಅವರು ಮಂಗಳವಾರದಂದು ನಗರದ ಜಿಲ್ಲಾ ಪಂಚಾಯತ್‌ನ ಡಾ. ವಿ.ಎಸ್ ಆಚಾರ್ಯ ಸಭಾಂಗಣದಲ್ಲಿ 75 ನೇ ಸ್ವಾತಂತ್ರ್ಯ ಸಂಗ್ರಾಮದ ಅಂಗವಾಗಿ ನಡೆಯಲಿರುವ ಅಮೃತ ಭಾರತಿಗೆ ಕನ್ನಡದ ಆರತಿ ಕಾರ್ಯಕ್ರಮದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುತ್ತಿದ್ದರು. […]