ಕರಾವಳಿಯಾದ್ಯಂತ ಇಂದಿನಿಂದ ಮಾ. 31ರ ವರೆಗೆ ಗುಡುಗು ಸಹಿತ ಮಳೆ.!
ಬೆಂಗಳೂರು: ಇಂದಿನಿಂದ ಮಾರ್ಚ್ 31 ರ ವರೆಗೆ ಕರಾವಳಿ ಸಹಿತ ರಾಜ್ಯದ ಹಲವು ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬಂಗಾಳಕೊಲ್ಲಿಯಲ್ಲಿ ಮೇಲ್ಮೈ ಸುಳಿಗಾಳಿ ಉಂಟಾಗಿದ್ದು, ಆ ಪರಿಣಾಮ ಕರಾವಳಿಯ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಶಿವಮೊಗ್ಗದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.