15 ದಿನಗಳೊಳಗೆ FRUITS ತಂತ್ರಾಂಶದಲ್ಲಿ ಜಮೀನಿನ ಮಾಹಿತಿ ದಾಖಲಿಸಲು ಜಿಲ್ಲಾಧಿಕಾರಿ ಸೂಚನೆ

ಉಡುಪಿ: FRUITS ತಂತ್ರಾಂಶದಲ್ಲಿ ಜಿಲ್ಲೆಯ ರೈತರ ಎಲ್ಲಾ ಜಮೀನಿನ ಮಾಹಿತಿಯನ್ನು ಮುಂದಿನ 15ದಿನಗಳ ಒಳಗೆ ದಾಖಲಿಸಲು ಸರ್ಕಾರದ ನಿರ್ದೇಶನವಿರುತ್ತದೆ. ಬರಗಾಲದಿಂದ ಉಂಟಾದ ಬೆಳೆ ನಷ್ಟಕ್ಕೆ ದೊರೆಯುವ ಪರಿಹಾರವು ಫ್ರೂಟ್ಸ್ ತಂತ್ರಾಂಶದ ದಾಖಲೆಯನ್ವಯ ರೈತರ ಖಾತೆಗೆ ನೇರವಾಗಿ ಮುಂದಿನ ದಿನಗಳಲ್ಲಿ ಜಮೆಯಾಗಲಿದೆ. ಪ್ರಸ್ತುತ ಜಿಲ್ಲೆಯಲ್ಲಿ ಒಟ್ಟು ಲಭ್ಯ ಫ್ಲಾಟ್ 10,20,896 ಗಳಲ್ಲಿ ಈವರೆಗೆ 4,59,453 ಫ್ಲಾಟ್‌ಗಳನ್ನು ಫ್ರೂಟ್ಸ್ ತಂತ್ರಾಂಶದಲ್ಲಿ ಸಂಯೋಜಿಸಲಾಗಿದ್ದು, ಇನ್ನೂ 5,61,440 ಫ್ಲಾಟ್‌ಗಳನ್ನು ಜೋಡಿಸಬೇಕಾಗಿರುತ್ತದೆ. ಸದ್ರಿ ಕಾರ್ಯವನ್ನು ಕ್ಷೇತ್ರ ಮಟ್ಟದಲ್ಲಿ ಕಂದಾಯ, ಕೃಷಿ ಮತ್ತು ತೋಟಗಾರಿಕೆ ಇಲಾಖೆಗಳ […]