ಉಡುಪಿಯಲ್ಲಿ ಬಂದ್ ಗೆ ನಿರಾಸ ಪ್ರತಿಕ್ರಿಯೆ: ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರ ಬಂಧನ
ಉಡುಪಿ: ಕೇಂದ್ರ ಮತ್ತು ರಾಜ್ಯ ಸರ್ಕಾರದ ಕೃಷಿ ಮಸೂದೆ, ಕಾರ್ಮಿಕ ಕಾಯ್ದೆಯನ್ನು ವಿರೋಧಿ ನಡೆಸಲಾಗುತ್ತಿರುವ ಕರ್ನಾಟಕ ಬಂದ್ ಹಿನ್ನೆಲೆಯಲ್ಲಿ ಉಡುಪಿ ಸಿಟಿ ಬಸ್ ನಿಲ್ದಾಣದಲ್ಲಿ ರಸ್ತೆ ತಡೆ ನಡೆಸಿದ ಪ್ರತಿಭಟನಾಕಾರರನ್ನು ಪೊಲೀಸರು ಬಂಧಿಸಿದ್ದಾರೆ. ಉಡುಪಿಯಲ್ಲೂ ಬಂದ್ ವಿವಿಧ ಸಂಘಟನೆಗಳು ಕರೆಕೊಟ್ಟಿವೆ. ಆದರೆ ಎಂದಿನಂತೆ ಬಸ್ ಸಂಚಾರ ಆರಂಭವಾಗಿದೆ. ಹಾಗಾಗಿ ಬಂದ್ ಗೆ ಕರೆ ನೀಡಿರುವ ಪ್ರತಿಭಟಾನಾಕಾರರು ಬಸ್ ಚಾಲಕರು ಹಾಗೂ ನಿರ್ವಾಹಕರಲ್ಲಿ ಬಸ್ ಬಿಡದಂತೆ ಮನವಿ ಮಾಡಿದರು. ಇದಕ್ಕೆ ಒಪ್ಪದಿದ್ದಾಗ ಬಸ್ ಚಾಲಕರು ಹಾಗೂ ಪ್ರತಿಭಟನಾಕಾರರ ಮಧ್ಯೆ […]