6ರಿಂದ 8ನೇ ತರಗತಿಗಳಿಗೆ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭ: ಸಚಿವ ಸುರೇಶ್ ಕುಮಾರ್

ಬೆಂಗಳೂರು: ರಾಜ್ಯದಲ್ಲಿ 6ರಿಂದ 8ನೇ ತರಗತಿವರೆಗೆ ಫೆಬ್ರವರಿ 22ರಿಂದ ಪೂರ್ಣ ಪ್ರಮಾಣದಲ್ಲಿ ಶಾಲೆ ಆರಂಭಿಸುವುದಕ್ಕೆ ನಿರ್ಧರಿಸಲಾಗಿದೆ ಎಂದು ಶಿಕ್ಷಣ ಸಚಿವ ಸುರೇಶ್ ಕುಮಾರ್ ತಿಳಿಸಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಎಲ್ಲ ಶಿಕ್ಷಣ ಚಟುವಟಿಕೆಗಳು ಪೂರ್ಣ ಪ್ರಮಾಣದಲ್ಲಿ ಮರು ಆರಂಭಗೊಂಡಂತಾಗಿದೆ. ಪೂರ್ಣ ಪ್ರಮಾಣದಲ್ಲಿ ಶಾಲೆಗಳನ್ನು ಪ್ರಾರಂಭಿಸಲು ಕೊವಿಡ್ ತಾಂತ್ರಿಕ ಸಲಹಾ ಸಮಿತಿ ಗ್ರೀನ್ ಸಿಗ್ನಲ್ ನೀಡಿದ್ದು, 1ರಿಂದ 5ನೇ ತರಗತಿ ವಿದ್ಯಾರ್ಥಿಗಳಿಗೆ ವಿದ್ಯಾಗಮ ಯೋಜನೆಯನ್ನು ಆರಂಭಿಸಲಾಗುವುದು. ವಿದ್ಯಾಗಮದ ಫಲಿತಾಂಶಗಳನ್ನು ನೋಡಿಕೊಂಡು ಮುಂದಿನ ದಿನಗಳಲ್ಲಿ ಶಾಲೆ ಆರಂಭಕ್ಕೆ ಚಿಂತನೆ ನಡೆಸಲಾಗುವುದು ಎಂದು […]