ವೈದ್ಯಕೀಯ ಗುಣಗಳಿರುವ ‘ಸ್ವರ್ಗದ ಹಣ್ಣಿನ’ ಬೀಜಗಳಿಂದ ವರ್ಷಕ್ಕೆ 2 ಲಕ್ಷ ಸಂಪಾದಿಸುವ ಕೇರಳದ ರೈತನ ಯಶೋಗಾಥೆ!
ಎರ್ನಾಕುಲಂ: 2018 ರಲ್ಲಿ ಕೇರಳದ ವೈಕೋಮ್‌ನ ಕಾರ್ಯಕ್ರಮವೊಂದರಲ್ಲಿ ಹೊರಭಾಗದಲ್ಲಿ ಮುಳ್ಳುಗಳನ್ನು ಹೊಂದಿರುವ ಹೊಳೆಯುವ ಕೆಂಪು-ಕಿತ್ತಳೆ ಬಣ್ಣದಲ್ಲಿರುವ ಕಲ್ಲಂಗಡಿ ಗಾತ್ರದ ಹಣ್ಣು, ಜೊಜೊ ಪುನ್ನಕಲ್ ಅವರ ಗಮನವನ್ನು ಸೆಳೆಯಿತು. ಹಣ್ಣಿನ ಬಗ್ಗೆ ಕುತೂಹಲಗೊಂಡು ಕೆಲವು ಬೀಜಗಳನ್ನು ಸಂಗ್ರಹಿಸಿ ಅದನ್ನು ತಮ್ಮ ತೋಟದಲ್ಲಿ ಬೆಳೆದ ಜೊಜೋ ಅವರು ಇಂದು ಅದರ ಬೀಜ ಮಾತ್ರದಿಂದಲೇ ವರ್ಷಕ್ಕೆ 2 ಲಕ್ಷ ರೂ ಸಂಪಾದನೆ ಮಾಡುತ್ತಿದ್ದಾರೆ! ಎರ್ನಾಕುಲಂನ ಜೋಜೋ ಪುನ್ನಕಲ್ ಅವರು ಕಳೆದ ನಾಲ್ಕು ವರ್ಷಗಳಿಂದ ವಿಯೆಟ್ನಾಂನ ವಿಲಕ್ಷಣ ಮತ್ತು ಪೌಷ್ಟಿಕಾಂಶಗಳುಳ್ಳ ಗ್ಯಾಕ್ ಹಣ್ಣನ್ನು […]