ಗಾಂಧಿ ಆಸ್ಪತ್ರೆಯ 30 ನೇ ವರ್ಷದ ವಾರ್ಷಿಕೋತ್ಸವ: ಮೇ.5 ರಂದು ಬೃಹತ್ ರಕ್ತದಾನ ಶಿಬಿರ

ಉಡುಪಿ: 1995 ಮೇ 5 ರಂದು ಪ್ರಾರಂಭವಾದ ಗಾಂಧಿ ಆಸ್ಪತ್ರೆಯು 30 ನೇ ವರ್ಷಕ್ಕೆ ಪಾದಾರ್ಪಣೆ ಮಾಡುತ್ತಿದ್ದು, ಪಂಚಮಿ ಟ್ರಸ್ಟ್ ಮತ್ತು ಪಂಚಲಹರಿ ಫೌಂಡೇಶನ್ ಆಶ್ರಯದಲ್ಲಿ ಮೇ.5 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 12.30 ರವರೆಗೆ ಉಡುಪಿ ಗಾಂಧಿ ಆಸ್ಪತ್ರೆಯಲ್ಲಿ ರಕ್ತನಿಧಿ, ಜಿಲ್ಲಾಸ್ಪತ್ರೆ ಸಹಯೋಗದೊಂದಿಗೆ ಬೃಹತ್ ರಕ್ತದಾನ ಶಿಬಿರ ನಡೆಯಲಿದೆ. ಉಡುಪಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ ಕಾರ್ಯಕ್ರಮವನ್ನುದ್ಘಾಟಿಸಲಿದ್ದು, ಜಿಲ್ಲಾ ಆರೋಗ್ಯಾಧಿಕಾರಿ ಡಾ. ಐ.ಪಿ ಗಡಾದ್, ಉಡುಪಿ ಜಿಲ್ಲಾ ಸರ್ಜನ್, ಡಾ. ಎಚ್ ಅಶೋಕ್, ಐ.ಎಂ.ಎ ಉಡುಪಿ-ಕರಾವಳಿ […]

ಮೇ 5 ರಂದು ಗಾಂಧಿ ಆಸ್ಪತ್ರೆಯಲ್ಲಿ ಬೃಹತ್ ರಕ್ತದಾನ ಶಿಬಿರ

ಉಡುಪಿ: ನಗರದ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಒಂದಾದ ಗಾಂಧಿ ಆಸ್ಪತ್ರೆಯು 29ನೇ ವರ್ಷಕ್ಕೆ ಪಾದಾ‌ಪ೯ಣೆ ಮಾಡುತ್ತಿರುವ ಸಂದರ್ಭದಲ್ಲಿ ಮೇ 5 ರಂದು ಬೆಳಿಗ್ಗೆ 8.30 ರಿಂದ ಮಧ್ಯಾಹ್ನ12.30 ರವರೆಗೆ ಬೃಹತ್ ರಕ್ತದಾನ‌‌ ಶಿಬಿರವನ್ನು ಆಯೋಜಿಸಿದ್ದು, ದಾನಿಗಳು ಸ್ವಯಂಪ್ರೇರಿತರಾಗಿ ಬಂದು ರಕ್ತದಾನ ಮಾಡುವ ಮೂಲಕ ಶಿಬಿರವನ್ನು ಯಶಸ್ವಿಗೊಳಿಸಬೇಕಾಗಿ ಗಾಂಧಿ ಆಸ್ಪತ್ರೆಯ ಆಡಳಿತ ಮಂಡಳಿಯು ತಿಳಿಸಿದೆ.

ಡಿ. 9 ರಂದು ಗಾಂಧಿ ಆಸ್ಪತ್ರೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರ

ಉಡುಪಿ: ಗಾಂಧಿ ಆಸ್ಪತ್ರೆ ಉಡುಪಿ, ಎಚ್.ಡಿ.ಎಫ್.ಸಿ ಬ್ಯಾಂಕ್, ಸ್ನೇಹ ಟ್ಯುಟೋರಿಯಲ್, ಲಯನ್ಸ್ ಮತ್ತು ಲಿಯೋ ಕ್ಲಬ್, ಉಡುಪಿ ಕೋ-ಆಪರೇಟಿವ್ ಟೌನ್ ಬ್ಯಾಂಕ್, ಉಡುಪಿ ಜಿಲ್ಲಾ ಯುವ ಬ್ರಾಹ್ಮಣ ಪರಿಷತ್ ಹಾಗೂ ರಕ್ತನಿಧಿ ಕಸ್ತೂರ್ಬಾ ಆಸ್ಪತ್ರೆ ಸಹಯೋಗದಲ್ಲಿ ಡಿ. 9 ಶುಕ್ರವಾರದಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 1 ಗಂಟೆವರೆಗೆ ಗಾಂಧಿ ಆಸ್ಪತ್ರೆಯಲ್ಲಿ ಸ್ವಯಂ ಪ್ರೇರಿತ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದ್ದು ರಕ್ತದಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಆಸ್ಪತ್ರೆಯ ಆಡಳಿತ ಮಂಡಳಿ ತಿಳಿಸಿದೆ.

ಸಿಬ್ಬಂದಿಗಳಿಗೆ ಉತ್ತಮ ಸೇವೆಗಾಗಿ ಗಾಂಧಿ ಆಸ್ಪತ್ರೆಗೆ ಇಪಿಎಫ್‌ಒ ಪ್ರಶಂಸಾ ಪ್ರಮಾಣ ಪತ್ರ

ಉಡುಪಿ: ಸಿಬ್ಬಂದಿಗಳಿಗೆ ಉತ್ತಮ ಸೇವೆಯನ್ನು ಒದಗಿಸಿದ ಕೊಡುಗೆಗಾಗಿ ಗಾಂಧಿ ಆಸ್ಪತ್ರೆಗೆ ಇಪಿಎಫ್‌ಒ ಪ್ರಶಂಸಾ ಪ್ರಮಾಣಪತ್ರವನ್ನು ನ.2 ರಂದು ಇಪಿಎಫ್‌ಒ ​​ನ 70 ನೇ ಸಂಸ್ಥಾಪನಾ ದಿನಾಚರಣೆಯ ಸಂದರ್ಭದಲ್ಲಿ ನೀಡಲಾಯಿತು. ಗಾಂಧಿ ಆಸ್ಪತ್ರೆಯ ವೈದ್ಯಕೀಯ ನಿರ್ದೇಶಕ ಡಾ. ವ್ಯಾಸರಾಜ ತಂತ್ರಿ ಎ. ಅವರು ಪ್ರಾದೇಶಿಕ ಪಿಎಫ್ ಆಯುಕ್ತ ಅಭಿಷೇಕ್ ರಂಜನ್ ಅವರಿಂದ ಪ್ರಮಾಣಪತ್ರವನ್ನು ಸ್ವೀಕರಿಸಿದರು. ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾಧಿಕಾರಿ ಎಂ. ಕೂರ್ಮಾ ರಾವ್ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹಾಕೆ ಅಕ್ಷಯ್ ಮಚ್ಚಿಂದ್ರ ಉಪಸ್ಥಿತರಿದ್ದರು.

ಗಾಂಧಿ ಆಸ್ಪತ್ರೆಯಲ್ಲಿ ಕೋಟಿ ಕಂಠ ಗಾಯನ

ಉಡುಪಿ: ನಗರದ ಹೃದಯ ಭಾಗದಲ್ಲಿರುವ ಗಾಂಧಿ ಆಸ್ಪತ್ರೆಯಲ್ಲಿ ಕೋಟಿ ಕಂಠ ಗಾಯನ ಕಾರ್ಯಕ್ರಮ ನಡೆಯಿತು. ಆಸ್ಪತ್ರೆಯ ವೈದ್ಯರು, ಶುಶ್ರೂಷಕರು ಮತ್ತು ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದರು.