ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಸಮಾವೇಶ
ಉಡುಪಿ: ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ.ಟ್ರಸ್ಟ್ (ರಿ) ಉಡುಪಿ ತಾಲೂಕು, ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ(ರಿ) ಮತ್ತು ಉಡುಪಿ ಶ್ರೀಕೃಷ್ಣ ಮಠ ಪರ್ಯಾಯ ಶ್ರೀಕೃಷ್ಣಾಪುರ ಮಠ ಇದರ ಜಂಟಿ ಆಶ್ರಯದಲ್ಲಿ ಗಾಂಧಿ ಜಯಂತಿ ಪ್ರಯುಕ್ತ ದುಶ್ಚಟ ಮುಕ್ತ ಸಮಾಜ ನಿರ್ಮಾಣಕ್ಕಾಗಿ ಜನಜಾಗೃತಿ ಮತ್ತು ಸಮಾವೇಶವನ್ನು ಪರ್ಯಾಯ ಸ್ವಾಮೀಜಿಯವರ ಪರವಾಗಿ ಮಠದ ದಿವಾನರಾದ ವರದರಾಜ ಭಟ್ ಇವರು ಉದ್ಘಾಟಿಸಿದರು. ಸಮಾರಂಭದಲ್ಲಿ ಉಡುಪಿ ತಾಲೂಕು ಜನಜಾಗೃತಿ ವೇದಿಕೆಯ ಅಧ್ಯಕ್ಷ ಸತ್ಯಾನಂದ ನಾಯಕ್, ಕಾಪು ಶಾಸಕ ಗುರ್ಮೆ ಸುರೇಶ ಶೆಟ್ಟಿ, […]
ಗಾಂಧೀಜಿ ತತ್ವಾದರ್ಶಗಳು ಅನುಕರಣೀಯ: ಯಶ್ ಪಾಲ್ ಸುವರ್ಣ
ಉಡುಪಿ: ಸ್ವಾತಂತ್ರ್ಯ ಸಂಗ್ರಾಮದ ಸಂದರ್ಭದಲ್ಲಿ ಮಹಾತ್ಮ ಗಾಂಧೀಜಿಯವರು ಅಜ್ಜರಕಾಡುವಿಗೆ ಭೇಟಿ ನೀಡಿ, ಈ ಭಾಗದ ಜನರನ್ನು ಒಂದೆಡೆ ಸೇರಿಸಿ, ಸ್ವಾತಂತ್ರ್ಯದ ಕುರಿತು ಕಾರ್ಯಕ್ರಮ ಆಯೋಜಿಸಿದ್ದು ಅವರ ನೆನಪಿಗಾಗಿ ಇಲ್ಲಿ ಗಾಂಧೀಜಿಯವರ ಪುತ್ಥಳಿಯನ್ನು ಭುಜಂಜ ಶೆಟ್ಟಿ ಪಾರ್ಕಿನಲ್ಲಿ ನಿರ್ಮಾಣ ಮಾಡಲಾಗಿದೆ. ಗಾಂಧೀಜಿಯವರ ವಿಚಾರ, ತತ್ವ ಹಾಗೂ ಆದರ್ಶಗಳನ್ನು ವಿಶ್ವದಲ್ಲಿ ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು ಅದನ್ನು ಪಾಲಿಸಬೇಕು ಎಂದು ಶಾಸಕ ಯಶ್‌ಪಾಲ್ ಎ ಸುವರ್ಣ ಹೇಳಿದರು. ಸೋಮವಾರ ನಗರದ ಅಜ್ಜರಕಾಡು ಭುಜಂಗ ಪಾರ್ಕಿನ ಗಾಂಧಿಕಟ್ಟೆಯಲ್ಲಿ, ಜಿಲ್ಲಾಡಳಿತ, ವಾರ್ತಾ ಮತ್ತು […]
ಮಾಹೆ ಗಾಂಧಿಯನ್ ಸೆಂಟರಿನಲ್ಲಿ ಗಾಂಧಿ ಜಯಂತಿ ಆಚರಣೆ
ಮಣಿಪಾಲ: ಜಾತಿ, ಧರ್ಮ, ಬಣ್ಣ, ಜನಾಂಗ ಇತ್ಯಾದಿ ತಾರತಮ್ಯದಿಂದ ಮುಕ್ತವಾದ ಮತ್ತು ಶಾಂತಿ, ಸಮಾನತೆ, ಅಹಿಂಸೆ ಮತ್ತು ಸಹಿಷ್ಣುತೆಯ ಮೇಲೆ ಆಧರಿತವಾದ ‘ಗಾಂಧಿಯ ಪ್ರಾಪಂಚಿಕ ದೃಷ್ಟಿ ಮತ್ತು ಪ್ರಪಂಚ’ ಬೇಕು ಎಂದು ಮಾಹೆಯ ಕುಲಪತಿ ಲೆಫ್ಟಿನೆಂಟ್ ಜನರಲ್ ಡಾ. ಎಂ.ಡಿ. ವೆಂಕಟೇಶ್ ಪ್ರತಿಪಾದಿಸಿದರು. ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಅಂಡ್ ಸೈನ್ಸಸ್ ಆಯೋಜಿಸಿದ್ದ ಗಾಂಧಿ ಜಯಂತಿ ಆಚರಣೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಮಹಾತ್ಮಾ ಗಾಂಧೀಜಿಯವರು ಆದರ್ಶಪ್ರಾಯವಾದ ಜೀವನ ನಡೆಸಿದವರು ಮತ್ತು ಅವರ ಆದರ್ಶಗಳ […]
ಸ್ವಾತಂತ್ರ ಹೋರಾಟಗಾರರ ಜೀವನ ಯುವಕರಿಗೆ ಸ್ಪೂರ್ತಿದಾಯಕ: ಡಾ.ನಿರಂಜನ್ ಚಿಪ್ಳೂಣ್ಕರ್ ಅಭಿಪ್ರಾಯ
ನಿಟ್ಟೆ: ಮಹಾತ್ಮಾ ಗಾಂಧೀಜಿ ಹಾಗೂ ಲಾಲ್ ಬಹಾದ್ದೂರ್ ಶಾಸ್ತ್ರಿಯವರಂತಹ ಮಹಾನ್ ನಾಯಕರು ಹಾಕಿ ಕೊಟ್ಟ ಅಹಿಂಸಾ ಮಾರ್ಗ ಹಾಗೂ ಅವರ ಜೀವನ ಶೈಲಿಯು ಇಂದಿನ ಯುವಕರಿಗೆ ಸ್ಫೂರ್ತಿದಾಯಕವಾಗಿದೆ ಎಂದು ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯದ ಪ್ರಾಂಶುಪಾಲ ಡಾ.ನಿರಂಜನ್ ಎನ್ ಚಿಪ್ಳೂಣ್ಕರ್ ಅಭಿಪ್ರಾಯಪಟ್ಟರು. ನಿಟ್ಟೆ ಮಹಾಲಿಂಗ ಅಡ್ಯಂತಾಯ ಸ್ಮಾರಕ ತಾಂತ್ರಿಕ ಮಹಾವಿದ್ಯಾಲಯವು ಭಾನುವಾರದಂದು ಆಯೋಜಿಸಿದ್ದ ಮಹಾತ್ಮಾ ಗಾಂಧೀಜಿ ಹಾಗೂ ಮಾಜಿ ಪ್ರಧಾನಿ ಲಾಲ್ ಬಹಾದ್ದೂರ್ ಶಾಸ್ತ್ರೀಜಿಯವರ ಜಯಂತಿ ಸಮಾರಂಭ ಹಾಗೂ ಅದರ ಅಂಗವಾಗಿ ಸ್ವಚ್ಛ ಭಾರತ್ […]