ಕುಂದಾಪುರ ಶ್ರೀ ವೆಂಕಟರಮಣ ಸಮೂಹ ವಿದ್ಯಾ ಸಂಸ್ಥೆಗಳಲ್ಲಿ ಗಾಂಧೀಜಿ ಹಾಗೂ ಶಾಸ್ತ್ರಿ ಜಯಂತಿ ಆಚರಣೆ

ಕುಂದಾಪುರ: ಕುಂದಾಪುರ ಶ್ರೀ ವೆಂಕಟರಮಣ ಆಂಗ್ಲ ಮಾಧ್ಯಮ ಶಾಲೆಯ ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಸಹಯೋಗದೊಂದಿಗೆ ಗಾಂಧೀ ಹಾಗೂ ಶಾಸ್ತ್ರಿ ಜಯಂತಿ ಆಚರಣೆಯನ್ನು ಶ್ರೀ ವೆಂಕಟರಮಣ ಸಮೂಹ ವಿದ್ಯಾಸಂಸ್ಥೆಯಲ್ಲಿ ಆಚರಿಸಲಾಯಿತು. ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ನ ಸ್ಥಾನೀಯ ಆಯುಕ್ತರಾದ ಕೊಗ್ಗ ಗಾಣಿಗ ಕಾರ್ಯಕ್ರಮವನ್ನು ಉದ್ಘಾಟಿಸಿ, ಗಾಂಧೀ ಹಾಗೂ ಶಾಸ್ತ್ರಿ ವಿಚಾರಧಾರೆಗಳ ಕುರಿತು ಮಾತನಾಡಿದರು. ಜಿಲ್ಲಾ ಸ್ಕೌಟ್ಸ್ ಮತ್ತು ಗೈಡ್ಸ್ ನ ತರಬೇತಿ ಆಯುಕ್ತ ಆನಂದ ಅಡಿಗ ಅವರು, ಸ್ಕೌಟ್ಸ್ ಮತ್ತು ಗೈಡ್ಸ್ ಘಟಕಗಳ ಕುರಿತು ಮಾತನಾಡಿದರು. […]