ಗಣೇಶ ಚತುರ್ಥಿ, ಮೊಹರಂ ಹಬ್ಬಕ್ಕೆ ಸರ್ಕಾರದಿಂದ ಹೊಸ ಮಾರ್ಗಸೂಚಿ ಬಿಡುಗಡೆ

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಸೋಂಕು ಹೆಚ್ಚುತ್ತಿದ್ದು, ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಹಬ್ಬಗಳ ಆಚರಣೆ ಸಂದರ್ಭದಲ್ಲಿ ತೆಗೆದುಕೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತಾಗಿ ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಗೌರಿ ಗಣೇಶ ಹಬ್ಬ, ಮೊಹರಂ ಸೇರಿದಂತೆ ಇತರೆ ಹಬ್ಬಗಳನ್ನು ಆಚರಿಸುವಾಗ ಜನದಟ್ಟಣೆ ಮತ್ತು ಒಗ್ಗೂಡುವಿಕೆಗಳನ್ನು ತಡೆಗಟ್ಟಲು ನಿರ್ಬಂಧಗಳನ್ನು ವಿಧಿಸುವಂತೆ ಸ್ಥಳೀಯ ಆಡಳಿತಕ್ಕೆ ರಾಜ್ಯ ಸರ್ಕಾರ ಆದೇಶಿಸಿದೆ. ಜಾತ್ರೆಗಳು, ದೇವಾಲಯದ ಹಬ್ಬಗಳು, ಮೆರವಣಿಗೆ ಮತ್ತು ಸಭೆ-ಸಮಾರಂಭಗಳಿಗೆ ಅವಕಾಶ ಇರುವುದಿಲ್ಲ. ಮೊಹರಂ ಆಚರಣೆಗೆ ಮಾರ್ಗಸೂಚಿಗಳು *ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಮೊಹರಂ ಪ್ರಾರ್ಥನಾ ಸಭೆ ಮತ್ತು […]