ಮಂಗಳೂರು: ಗಣೇಶ ಚತುರ್ಥಿ ಹಿನ್ನೆಲೆ ಸೆ.19 ರಂದು ರಜೆ ಘೋಷಿಸಲು ಉಸ್ತುವಾರಿ ಸಚಿವರ ಸೂಚನೆ
ಮಂಗಳೂರು: ಗಣೇಶ ಹಬ್ಬದ ಆಚರಣೆಯ ಹಿನ್ನೆಲೆಯಲ್ಲಿ ದ.ಕ. ಜಿಲ್ಲೆಯಲ್ಲಿ ಸರ್ಕಾರಿ ರಜೆಯನ್ನು ಸೆಪ್ಟೆಂಬರ್18 ರ ಬದಲು ಸೆಪ್ಟೆಂಬರ್ 19 ರಂದು ನೀಡಲು ಸೂಕ್ತ ಕ್ರಮ ಕೈಗೊಳ್ಳುವಂತೆ ದ.ಕ. ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಅವರು ರಾಜ್ಯ ಮುಖ್ಯ ಕಾರ್ಯದರ್ಶಿಗೆ ಬುಧವಾರ ಸೂಚನೆ ನೀಡಿದ್ದಾರೆ. ವಿಧಾನ ಪರಿಷತ್ ಸದಸ್ಯ, ಶಾಸಕ ಕೆ.ಪ್ರತಾಪ್ ಸಿಂಹ್ ನಾಯಕ್ ಈ ಬಗ್ಗೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದಾರೆ. ಹಬ್ಬವನ್ನು ಆಚರಿಸಲು ಸೆ.18 ರ ಸೋಮವಾರ ಸರ್ಕಾರಿ ರಜೆ ಎಂದು ಘೋಷಿಸಲಾಗಿದ್ದು, ಇದೀಗ ಅದನ್ನು ಮಾರ್ಪಡಿಸಿ […]
ಗಣೇಶ ಚತುರ್ಥಿಯಂದು ಹೊಸ ಸಂಸತ್ ಭವನದಲ್ಲಿ ನಡೆಯಲಿದೆ ಸಂಸತ್ತಿನ ವಿಶೇಷ ಅಧಿವೇಶನ?
ನವದೆಹಲಿ: ಸೆಪ್ಟೆಂಬರ್ 18 ರಿಂದ ಐದು ದಿನಗಳ ಕಾಲ ನಡೆಯಲಿರುವ ಸಂಸತ್ತಿನ ವಿಶೇಷ ಅಧಿವೇಶನವು ಸೆಪ್ಟೆಂಬರ್ 18 ರಂದು ಹಳೆಯ ಕಟ್ಟಡದಲ್ಲಿ ಪ್ರಾರಂಭವಾಗಲಿದೆ ಮತ್ತು ನಂತರ ಸೆಪ್ಟೆಂಬರ್ 19 ರಂದು ಗಣೇಶ ಚತುರ್ಥಿಯ ಸಂದರ್ಭದಲ್ಲಿ ಹೊಸ ಕಟ್ಟಡಕ್ಕೆ ಸ್ಥಳಾಂತರಗೊಳ್ಳಲಿದೆ ಎಂದು ಬಲ್ಲ ಮೂಲಗಳು ತಿಳಿಸಿರುವುದಾಗಿ ಸುದ್ದಿ ಸಂಸ್ಥೆ ಎ.ಎನ್.ಐ ವರದಿ ಮಾಡಿದೆ. ಕೇಂದ್ರ ಸರ್ಕಾರವು ಸಂಸತ್ತಿನ ವಿಶೇಷ ಅಧಿವೇಶನವನ್ನು ಕರೆದಿದ್ದು, ಅಧಿವೇಶನದ ವಿಷಯವನ್ನು ಇನ್ನೂ ಹೇಳಲಾಗಿಲ್ಲ. ಮಾಧ್ಯಮಗಳಲ್ಲಿ ಹಲವಾರು ರೀತಿಯ ಊಹಾಪೋಹಗಳು ಹರಿದಾಡುತ್ತಿದ್ದು ಈ ಬಗ್ಗೆ ಸರಕಾರದಿಂದ […]
ಜಲಮೂಲಗಳಲ್ಲಿ ಪ್ಲಾಸ್ಟರ್ ಆಫ್ ಪ್ಯಾರಿಸ್ ಹಾಗೂ ಬಣ್ಣದ ವಿಗ್ರಹಗಳ ವಿಸರ್ಜನೆ ನಿಷೇಧ
ಉಡುಪಿ: ಜಿಲ್ಲೆಯಲ್ಲಿ ಸ್ವರ್ಣಗೌರಿ ಹಾಗೂ ವಿನಾಯಕ ಚತುರ್ಥಿ ಹಬ್ಬಗಳ ಸಂದರ್ಭದಲ್ಲಿ ಸಾರ್ವಜನಿಕರು ಪ್ಲಾಸ್ಟರ್ ಆಫ್ ಪ್ಯಾರಿಸ್ (ಪಿ.ಒ.ಪಿ.) ಮತ್ತು ಬಣ್ಣದ ವಿಗ್ರಹಗಳನ್ನು ಸ್ಥಾಪಿಸಿ, ಪೂಜಿಸಿದ ನಂತರ ಕೆರೆ, ಬಾವಿ ಹಾಗೂ ಇನ್ನಿತರ ನೈಸರ್ಗಿಕ ಜಲ ಮೂಲಗಳಲ್ಲಿ ವಿಸರ್ಜಿಸುತ್ತಿದ್ದು, ಇದರಿಂದಾಗಿ ನೈಸರ್ಗಿಕ ಜಲ ಮೂಲಗಳು ಕಲುಷಿತಗೊಂಡು ಇವುಗಳ ಭೌತಿಕ ಹಾಗೂ ರಾಸಾಯನಿಕ ಗುಣಗಳು ಮಾರ್ಪಟ್ಟು ಪರಿಸರದ ಮೇಲೆ ದುಷ್ಪರಿಣಾಮ ಉಂಟಾಗುವುದಲ್ಲದೇ ಪ್ರಾಣಿ, ಪಕ್ಷಿ ಹಾಗೂ ಜಲಚರಗಳ ಜೀವಕ್ಕೆ ಅಪಾಯವಾಗುವುದರ ಜೊತೆಗೆ ಸಾರ್ವಜನಿಕರ ಆರೊಗ್ಯಕ್ಕೂ ಧಕ್ಕೆ ಉಂಟಾಗುತ್ತದೆ. ಆದ್ದರಿಂದ ಕರ್ನಾಟಕ […]
ಜಿಲ್ಲೆಯಲ್ಲಿ ಸಂಭ್ರಮದ ಗಣೇಶೋತ್ಸವ
ಉಡುಪಿ ಜಿಲ್ಲೆಯಾದ್ಯಂತ ಸಂಭ್ರಮೋಲ್ಲಾಸದ ಗಣೋಶೋತ್ಸವ ಜರುಗಿದ್ದು, ವಿವಿಧೆಡೆಯ ಗಣಪನ ಹಬ್ಬದ ದೃಶ್ಯಗಳು
ಜೆನೆಕ್ಸ್ಟ್ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಪರಿಸರ ಸ್ನೇಹಿ ಗಣೇಶನ ಮೂರ್ತಿ ವಿತರಣೆ
ಉಡುಪಿ: ಜೆನೆಕ್ಸ್ಟ್ ಚಾರಿಟೇಬಲ್ ಟ್ರಸ್ಟ್ ಮತ್ತು ಭಾರತಿನಗರ ನಿವಾಸಿಗಳ ವೇದಿಕೆ ವತಿಯಿಂದ ವಿನೂತನ ರೀತಿಯಲ್ಲಿ ಗಣೇಶನ ಹಬ್ಬವನ್ನು ಆಚರಿಸಲಾಗುತ್ತಿದ್ದು, ಮಣ್ಣಿನ ಮತ್ತು ಪರಿಸರ ಸ್ನೇಹಿ ಗಣೇಶ ಮೂರ್ತಿಗಳನ್ನು ಸ್ಥಳದಲ್ಲೇ ಅಚ್ಚು ಮಾಡಿ ಮಕ್ಕಳಿಗೆ ವಿತರಿಸಲಾಗುವುದು.