ಗಣೇಶ ಕೊಲೆಕಾಡಿಯವರಿಗೆ ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಪ್ರಶಸ್ತಿ
ಉಡುಪಿ: ಯಕ್ಷಗಾನ ಕಲಾರಂಗ ಯಕ್ಷ ವಿದ್ವಾಂಸರಿಗೆ ನೀಡುವ ತಲ್ಲೂರು ಕನಕ-ಅಣ್ಣಯ್ಯ ಶೆಟ್ಟಿ ಸ್ಮರಣೆಯಲ್ಲಿ ನೀಡುವ ಯಕ್ಷಗಾನ ಕಲಾರಂಗ ಪ್ರಶಸ್ತಿಗೆ ಛಾಂದಸ, ಪ್ರಸಂಗ ಕರ್ತ, ಕಲಾವಿದ ಗಣೇಶ ಕೊಲೆಕಾಡಿ ಆಯ್ಕೆಯಾಗಿದ್ದಾರೆಂದು ಸಂಸ್ಥೆಯ ಅಧ್ಯಕ್ಷ ಎಂ. ಗಂಗಾಧರ ರಾವ್, ಕಾರ್ಯದರ್ಶಿ ಮುರಲಿ ಕಡೆಕಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪ್ರಶಸ್ತಿ ಪ್ರದಾನ ಸಮಾರಂಭವು ಡಿಸೆಂಬರ್ 25ರ ಶುಕ್ರವಾರ ಸಂಜೆ 5 ಗಂಟೆಗೆ ಶ್ರೀಕೃಷ್ಣಮಠದ ರಾಜಾಂಗಣದಲ್ಲಿ ನಡೆಯಲಿದೆ. ಪರ್ಯಾಯ ಅದಮಾರು ಮಠಾಧೀಶರಾದ ಈಶಪ್ರಿಯ ತೀರ್ಥ ಶ್ರೀಪಾದರು ಪ್ರಶಸ್ತಿ ಪ್ರದಾನ ಮಾಡಿ ಅನುಗ್ರಹಿಸಲಿದ್ದಾರೆ. ಪ್ರಶಸ್ತಿ ₹ […]