ಗಣೇಶ ಚತುರ್ಥಿ ಆಚರಣೆ: ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪೂರ್ವಾಭಾವಿ ಸಭೆ

ಉಡುಪಿ: ಮಂಗಳವಾರ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗೌರಿ ಗಣೇಶ ಚತುರ್ಥಿ ಸಂದರ್ಭದಲ್ಲಿ ಯಾವುದೇ ಗೊಂದಲ ಉಂಟಾಗದಂತೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಜಿಲ್ಲಾಧಿಕಾರಿ ಕೂರ್ಮಾ ರಾವ್ ನೇತೃತ್ವದಲ್ಲಿ ಸಭೆ ನಡೆಯಿತು. ಜಿಲ್ಲೆಯಲ್ಲಿ ಆಗಸ್ಟ್ 31 ರಿಂದ ಆರಂಭವಾಗುವ ಗಣೇಶ ಚತುರ್ಥಿ ಹಬ್ಬದ ಸಂದರ್ಭದಲ್ಲಿ ಗಣೇಶ ಮೂರ್ತಿಯ ಪ್ರತಿಷ್ಠಾಪನೆ, ವಿಸರ್ಜನೆ ಕಾರ್ಯಕ್ರಮಗಳಿಗೆ ಅಗತ್ಯ ಅನುಮತಿಗಳನ್ನು ನೀಡುವಾಗ ಕಂದಾಯ, ನಗರ ಸ್ಥಳೀಯ ಸಂಸ್ಥೆಗಳು ಮತ್ತು ಪೊಲೀಸ್ ಇಲಾಖೆಗಳ ನಡುವೆ ಯಾವುದೇ ಗೊಂದಲಗಳಿಗೆ ಆಸ್ಪದ ನೀಡದೆ ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವಂತೆ ಜಿಲ್ಲಾಧಿಕಾರಿ ಸೂಚನೆ […]