ಗಣೇಶೋತ್ಸವ ಆಚರಣೆ ಕುರಿತು ಸರ್ಕಾರ ಹೊರಡಿಸಿರುವ ಮಾರ್ಗ ಸೂಚಿಗಳನ್ನು ಪಾಲಿಸಿ: ಆಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು
ಉಡುಪಿ: ರಾಜ್ಯ ಸರ್ಕಾರ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿ ಹೊರಡಿಸಿರುವ ನೂತನ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವುದರ ಜತೆಗೆ ಸರಳವಾಗಿ ಗಣೇಶೋತ್ಸವ ಆಚರಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಸದಾಶಿವ ಪ್ರಭು ತಿಳಿಸಿದರು. ಜಿಲ್ಲಾ ಪಂಚಾಯತ್ ಸಂಭಾಂಗಣದಲ್ಲಿ ಗುರುವಾರ ನಡೆದ ಗಣೇಶ ಹಬ್ಬ ಆಚರಣೆ ಕುರಿತ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕೊರೊನಾಸೋಂಕು ಹರಡುವುದನ್ನು ನಿಯಂತ್ರಿಸುವ ಉದ್ದೇಶದಿಂದ ಸರ್ಕಾರ ಗಣೇಶೋತ್ಸವ ಆಚರಣೆಗೆ ಸಂಬಂಧಿಸಿ ಮಾರ್ಗ ಸೂಚಿಯನ್ನು ಹೊರಡಿಸಿದೆ. ಸಾರ್ವಜನಿಕರು ಮಾರ್ಗ ಸೂಚಿಯನ್ನು ಅನುಸರಿಸವುದರೊಂದಿಗೆ ಸರಳವಾಗಿ ಶೃದ್ದ ಭಕ್ತಿಯಿಂದ ಹಬ್ಬವನ್ನು ಆಚರಿಸಬೇಕು ಎಂದರು. ಗಣೇಶನ […]