ಗಂಗೊಳ್ಳಿ: ಬೈಕ್ ಗಳ ಮುಖಾಮುಖಿ ಡಿಕ್ಕಿ; ಪತ್ರಿಕಾ ವಿತರಕ ಮೃತ್ಯು
ಗಂಗೊಳ್ಳಿ: ಎರಡು ಬೈಕ್ ಗಳ ನಡುವೆ ನಡೆದ ಭೀಕರ ಅಪಘಾತದಲ್ಲಿ ಪತ್ರಿಕಾ ವಿತರಕರೊಬ್ಬರು ಮೃತಪಟ್ಟ ಘಟನೆ ಗಂಗೊಳ್ಳಿಯ ಗುಜ್ಜಾಡಿ ಸಮೀಪ ಸಂಭವಿಸಿದೆ. ಮೃತರನ್ನು ಪತ್ರಿಕಾ ವಿತರಕ ಗುಜ್ಜಾಡಿ ನಿವಾಸಿ ಅಶೋಕ್ ಕೊಡಂಚ ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಕೊಡಂಚ ಗಂಭೀರಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ಕೊಂಡೊಯ್ಯುವ ದಾರಿ ಮಧ್ಯೆ ಸಾವನ್ನಪ್ಪಿದ್ದಾರೆ. ಇನ್ನೋರ್ವ ಬೈಕ್ ಸವಾರ ಸಾಹಿಲ್ ಎಂಬಾತನಿಗೆ ಗಾಯವಾಗಿದೆ. ಇಬ್ಬರನ್ನು ಆಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ಕೊಂಡೊಯ್ಯಲು ಇಬ್ರಾಹಿಂ ಗಂಗೊಳ್ಳಿ ಹಾಗೂ ಅಬ್ರಾರ್ ಸೂಫಿ ಸಹಕರಿಸಿದರು.