ಗಂಗೊಳ್ಳಿ: ಮೀನುಗಾರಿಕಾ ಬೋಟ್ ಅಗ್ನಿ ದುರಂತ; 50 ಲಕ್ಷ ಪರಿಹಾರ ನೀಡಲು ಶಾಸಕ ಯಶ್ಪಾಲ್ ಸುವರ್ಣ ಆಗ್ರಹ

ಕುಂದಾಪುರ: ಗಂಗೊಳ್ಳಿ ಬಂದರು ಪ್ರದೇಶದಲ್ಲಿ ನಿಲ್ಲಿಸಿದ್ದ 9 ಬೋಟ್ ಗಳು ಅಗ್ನಿ ಅವಘಡದಿಂದ ಹಾನಿಗೀಡಾಗಿದ್ದು ಘಟನಾ ಸ್ಥಳಕ್ಕೆ ಶಾಸಕ ಯಶ್ ಪಾಲ್ ಸುವರ್ಣ, ಕಿರಣ್ ಕುಮಾರ್ ಕೊಡ್ಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ ಪಾಲ್ ಸುವರ್ಣ, ಅಗ್ನಿ ಅವಘಡದಿಂದ ಸುಮಾರು 10 ಕೋಟಿಯಷ್ಟು ನಷ್ಟ ಉಂಟಾಗಿದ್ದು, ರಾಜ್ಯ ಸರಕಾರ ಕೂಡಲೇ ಬೋಟ್ ಮಾಲೀಕರಿಗೆ ತಲಾ 50 ಲಕ್ಷ ಪರಿಹಾರ ನೀಡಿ ಸಂಕಷ್ಟಕ್ಕೀಡಾದ ಮೀನುಗಾರರಿಗೆ ಬದುಕು ಕಟ್ಟಿಕೊಳ್ಳಲು ಸಹಕಾರ ನೀಡಬೇಕು ಎಂದಿದ್ದಾರೆ. […]