ಕಳಪೆ ಕಾಮಗಾರಿಯಿಂದ ಗಂಗೊಳ್ಳಿ ಬಂದರು ಜೆಟ್ಟಿ ಕುಸಿತ: ನೀರಿನಲ್ಲಿ ಹೋಮವಾಯ್ತು 12 ಕೋಟಿ ರೂಪಾಯಿ ಅನುದಾನ
ಕುಂದಾಪುರ: ಕಳಪೆ ಕಾಮಗಾರಿಯಿಂದ ಇಲ್ಲಿನ ಗಂಗೊಳ್ಳಿ ಬಂದರಿನಲ್ಲಿ 12 ಕೋಟಿ ರೂಪಾಯಿ ಅನುದಾನದಲ್ಲಿ ನಿರ್ಮಿಸಿದ್ದ ಜೆಟ್ಟಿ ಕುಸಿದಿದ್ದು, ನಿರ್ಮಾಣ ಕಾಮಗಾರಿಯು ನೀರಿನಲ್ಲಿಟ್ಟ ಹೋಮದಂತಾಗಿದ್ದು, ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ. ಆರಂಭದಿಂದಲೂ ಅವೈಜ್ಞಾನಿಕ ಕಾಮಗಾರಿಯಿಂದಾಗಿ ಒಂದಿಲ್ಲೊಂದು ಸಮಸ್ಯೆಗೆ ತುತ್ತಾಗುತ್ತಿದ್ದ ಗಂಗೊಳ್ಳಿ ಬಂದರು ಪ್ರದೇಶ ಇದೀಗ ಮತ್ತೆ ಸುದ್ದಿಯಲ್ಲಿದೆ. ಗಂಗೊಳ್ಳಿಯ ಮೀನುಗಾರಿಕಾ ಬಂದರು ಪ್ರದೇಶದಲ್ಲಿ ನಡೆಯುತ್ತಿರುವ ಜೆಟ್ಟಿ ನಿರ್ಮಾಣ ಕಾರ್ಯದ ವೇಳೆ ಜೆಟ್ಟಿ ಭಾಗ ಕುಸಿತಕ್ಕೊಳಗಾಗಿದೆ. 150 ಮೀಟರಿಗೂ ಅಧಿಕ ಜೆಟ್ಟಿ ಕುಸಿದಿದ್ದು, ಸ್ಥಳೀಯ ಮೀನುಗಾರರು ಆತಂಕಕ್ಕೀಡಾಗಿದ್ದಾರೆ. ಜೆಟ್ಟಿ ಭಾಗವು ನಿರಂತರವಾಗಿ ಕುಸಿಯುತ್ತಿದ್ದರೂ […]